ಬಾಗಲಕೋಟೆ | ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯ

Date:

Advertisements

ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಅಹಿಂದ ಸಂಘಟನೆ, ಕಾಂಗ್ರೆಸ್‌ನ ಹಿಂದುಳಿದ ಘಟಕದಿಂದ ಮುಧೋಳ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಸರ್ಕಲ್‌ನಿಂದ ತಹಶೀಲ್ದಾರ್‌ ಕಚೇರಿವರೆಗೆ ಪಾದಯಾತ್ರೆ ತೆರಳಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಮಾತನಾಡಿ, “ಜಾತಿ ಜನಾಂಗದ ಸಬಲೀಕರಣದ ಗುರಿ ಹೊಂದಲು ಮತ್ತು ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಗೊಳಿಸಲು ʼಕಾಂತರಾಜ ಆಯೋಗದ ವರದಿʼ ಜಾರಿಗೆ ತರಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

Advertisements

ಅಹಿಂದ ಸಂಘಟನೆಗಳ ಅಧ್ಯಕ್ಷ ಗೋವಿಂದ ಕೌಲಗಿ ಮಾತನಾಡಿ, “ರಾಜ್ಯದಲ್ಲಿ ಅತಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕ ಸಬಲೀಕರಣಕ್ಕಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ಜಾತಿಗಣತಿ ಜಾರಿ ಮಾಡುವ ಮೂಲಕ ಇತಿಹಾಸದ ಪುಟದಲ್ಲಿ ತಮ್ಮ ಹೆಸರು ಉಳಿಯುತ್ತದೆ. ಹಿಂಜರಿಯದೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಗಳಿಗೆ ಸದಾ ನಾವು ಬೆಂಬಲಸುತ್ತ ಬಂದಿದ್ದೇವೆ, ಮುಂದೆಯೂ ಕೂಡ ನಿಮ್ಮ ಬೆಂಬಲಕ್ಕೆ ಗಟ್ಟಿಯಾಗಿ ನಿಂತು ಹೋರಾಡುತ್ತೇವೆ” ಎಂದು ಮನವಿ ಮಾಡಿಕೊಂಡರು.

ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟದ ನಿರ್ದೇಶಕ ಲಕ್ಷ್ಮಣ ಮಾಲಗಿ ಮಾತನಾಡಿ, “ಸಮಾಜದಲ್ಲಿ ಹಿಂದುಳಿದ ವರ್ಗಗಳು ಪ್ರಬಲವಾದ ರಾಜಕೀಯ, ಆರ್ಥಿಕವಾಗಿ ವಾಣಿಜ್ಯೋದ್ಯಮದಲ್ಲಿ ಧ್ವನಿ ಹೊಂದಲು ಕಾಂತರಾಜ ಆಯೋಗದ ವರದಿ ಕೂಡಲೇ ಜಾರಿಗೆ ಬಂದರೆ ಮಾತ್ರ ಸಮಾನತೆ ಮತ್ತು ನ್ಯಾಯವನ್ನು ಸಾಧಿಸಲು ಸಾಧ್ಯ” ಎಂದು ನುಡಿದರು. 

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಎಸ್‌ಬಿಯುಡಿಎ ನಿವೇಶನ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ: ಇಮ್ರಾನ್

“ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನಿಮ್ಮ ಬದ್ಧತೆಗೆ ಹಿಂದುಳಿದ ವರ್ಗದ ಜನರು ತಮ್ಮನ್ನು ಬೆಂಬಲಿಸುತ್ತ ಬಂದಿದೆ. ಸದಾ ನಿತ್ಯವೂ ನಿಮ್ಮ ಜತೆಗೆ ನಿಲ್ಲುತ್ತೇವೆ. ಯಾವುದೇ ಕಾರಣದಿಂದ ಜಾತಿ ಜನಗಣತಿಯಿಂದ ಹಿಂದೆ ಸರಿಯದೆ ಜಾರಿ ಮಾಡಿ ಅನುಷ್ಠಾನ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯನವರ ಮೇಲೆ ಅಚಲವಾದ ನಂಬಿಕೆಯಿದೆ” ಎಂದು ಕಾಂಗ್ರೆಸ್ ಮುಖಂಡ ಸಂಗಪ್ಪ ಇಮ್ಮನವರ ಹೇಳಿದರು.‌

ಕಾಂಗ್ರೆಸ್‌ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಶೇಪಿಕ ಬೇಪಾರಿ ಗಣೇಶ ಮೇತ್ರಿ, ಅಹಿಂದ ಉಪಾಧ್ಯಕ್ಷ ಜಾವೇದ ಹವಾಲ್ದಾರ, ರವಿ ರೊಡ್ಡಪ್ಪನವರ, ಲಕಪ್ಪ ಕರೊಲಿ, ಶಿವಾನಂದ ಮ್ಯಾಗೇರಿ, ಶಿದ್ದಣ್ಣ ಬಾಡಿಗೆ, ಯಲ್ಲಪ್ಪ ಗಳಕಣವರ, ಮಲ್ಲಿಕಾರ್ಜುನ ಬಡಿಗೇರ, ಶಿವಪ್ಪ ಡೊಳ್ಳಿ, ನೂರಲ್ಲಿ ಶೇಖ, ಸಂಗಪ್ಪ ಅಮೋತಿ, ಲಕ್ಷ್ಮಣ ಮರಡಿ, ಸುರೇಶ್ ಸಿದ್ದಾಪುರ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X