ರಾಜ್ಯದ ಪ್ರತಿಷ್ಠಿತ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ನಿರ್ದೇಶಕರಾಗಿ ಮತ್ತು ಡೀನ್ ಆಗಿ ತುರುವೇಕೆರೆ ತಾಲೂಕಿನ ಬಾಣಸಂದ್ರದ ಡಾ.ಎ.ಜೆ.ಲೋಕೇಶ್ ಅಧಿಕಾರ ಸ್ವೀಕರಿಸಿದ್ದಾರೆ.
ಐಹೃದಯರೋಗ ತಜ್ಞರಾಗಿರುವ ಡಾ.ಲೋಕೇಶ್ ತುರುವೇಕೆರೆಯಲ್ಲಿ ಹಲವು ವರ್ಷಗಳ ಕಾಲ ಚಿಕಿತ್ಸಾಲಯ ತೆರೆದು ಜನರಿಗೆ ಸೇವೆ ಸಲ್ಲಿಸಿದ್ದರು. ಡಾ.ಎ.ಜೆ.ಲೋಕೇಶ್ ರವರು ಇದುವರೆಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಾಮಾನ್ಯ ವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆಸಲ್ಲಿಸುತ್ತಿದ್ದರು. ಈಗ ಅವರನ್ನು ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾಗಿ ಮತ್ತು ಡೀನ್ ಆಗಿ ಸರ್ಕಾರ ನೇಮಿಸಿ ಆದೇಶಿಸಿದೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬಾಣಸಂದ್ರದ ಡಾ.ಎ.ಜೆ.ಲೋಕೇಶ್ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾಗಿ ಮತ್ತು ಡೀನ್ ಆಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಡಾ.ಎ.ಜೆ.ಲೋಕೇಶ್ ರವರನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ಮಸಾಲಾ ಜಯರಾಮ್, ಬೆಮಲ್ ಕಾಂತರಾಜ್, ಅಂಬಿಕಾ ಡ್ರೈವಿಂಗ್ ಸ್ಕೂಲ್ ನ ಗಿಡ್ಡೇಗೌಡ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಒಕ್ಕಲಿಗರ ಸಂಘ, ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಪದಾದಿಕಾರಿಗಳು ಅಭಿನಂದಿಸಿದ್ದಾರೆ.
ವರದಿ – ನಾಗಭೂಷಣ್ ತುರುವೇಕೆರೆ