ನವೆಂಬರ್​ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

Date:

Advertisements

50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್​ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1​ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೂಚನೆ ನೀಡಿದರು.

ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಬೆಂಗಳೂರು ಜಿಲ್ಲೆಯಲ್ಲಿ ಶೇ 50 ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

Advertisements

ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಹೇಳಿದರು.

ಕೊರೊನಾ ಅಕ್ರಮ ಕುರಿತ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಸಬ್ ಕಮಿಟಿ ಮಾಡಲಾಗಿದೆ. ಹಬ್ಬದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾಡಿದ್ದು ಮಾತನಾಡುತ್ತೇನೆ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X