ಮಿಲಾದ್ ಮತ್ತು ಗಣಪತಿ ಹಬ್ಬಗಳ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಜಾರಿಗೊಳಿಸಿ ಯಾವುದೇ ರೀತಿಯ ಕೋಮು ಉದ್ವಿಗ್ನತೆ ಮತ್ತು ಗಲಭೆಗಳುಂಟಾಗದಂತೆ ನಾಡಿನ ಜನರು ಸಡಗರ ಹಾಗೂ ನಿರ್ಭೀತಿಯಿಂದ ಹಬ್ಬಗಳನ್ನು ಆಚರಿಸಲು ಅನುವು ಮಾಡಿಕೊಟ್ಟ ಎಸ್‌ಪಿ ಮಿಥುನ್ ಕುಮಾರ್ ಅವರಿಗೆ ಧನ್ಯವಾದಗಳು ಎಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕಾರ್ಯಕರ್ತರು ಹೇಳಿದರು.
ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಅಕ್ಟೋಬರ್ 9ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರನ್ನು ಭೇಟಿ ಸನ್ಮಾನಿಸಿದ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು.
ಇದೇ ಸಂದರ್ಭದಲ್ಲಿ ಸಮಾಜದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ವ್ಯಸನದ ಕುರಿತು ಚರ್ಚಿಸಿದರು. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಬಹಳಷ್ಟು ಸಲಹೆ ಸೂಚನೆಗಳನ್ನು ನೀಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೀಳುವಂತಿದೆ ಖಾಜಾಕೋಟನೂರ್ ಗ್ರಾಮದ ಬ್ರಿಡ್ಜ್; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ
ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಮಹಮ್ಮದ್ ಫಾರೂಕ್, ಜಿಲ್ಲಾ ಕಾರ್ಯದರ್ಶಿ ಸೈಯದ್ ಸುಹೇಲ್, ಮೊಹಮ್ಮದ್ ಆಸಿಫ್ ಮತ್ತು ಕಾರ್ಯಕರ್ತರುಗಳಾದ ಹಬಿಬುಲ್ಲಾ, ಮಹಮ್ಮದ್ ಸಲೀಂ, ಉಬೇದುಲ್ಲಾ, ರಫೀಕ್ ಅತಾವುರ್ರಹ್ಮಾನ್, ಸಖ್‌ಲೈನ್, ಸಾದಿಕ್ ಸೇರಿದಂತೆ ಇತರರು ಇದ್ದರು.