ತುಮಕೂರು ದಸರಾ ಉತ್ಸವ : ಗಮನ ಸೆಳೆದ ಮಿನಿ ಮ್ಯಾರಥಾನ್

Date:

Advertisements

ತುಮಕೂರು ದಸರಾ ಉತ್ಸವ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಿನಿ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಉತ್ಸಾಹದಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಿನಿ ಮ್ಯಾರಥಾನ್‌ಗೆ ಬಾವುಟ ತೋರುವ ಮೂಲಕ ಚಾಲನೆ ನೀಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಯುವ ಸಮುದಾಯ ಕ್ರೀಡೋತ್ಸಾಹ ಬೆಳೆಸಲೆಂದೇ ಈ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸದ್ಯದಲ್ಲೇ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಆಯೋಜಿಸಲಾಗುವುದು ಎಂದು ಹೇಳಿದರು.

1000533205

ತುಮಕೂರು ಜಿಲ್ಲೆ ಮೊದಲಿನಿಂದಲೂ ಕ್ರೀಡೆಗಳಿಗೆ ಖ್ಯಾತಿ ಹೊಂದಿದೆ. ಜಿಲ್ಲೆಯಲ್ಲಿ ಹಲವಾರು ಮಂದಿ ರಾಷ್ಟ್ರೀಯ ಕ್ರೀಡಾಪಡುಗಳಿದ್ದಾರೆ. ಕ್ರೀಡಾಸಕ್ತರಿಗೆ ಪೂರಕವಾಗಿಯೇ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣವನ್ನು ಸುಮಾರು 58 ಕೋಟಿ ರೂ ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗಿದೆ. ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಹಮ್ಮಿಕೊಳ್ಳುವ ಪೂರ್ವದಲ್ಲಿ ಈ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಿರುವುದು ಗುಣಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಿಸಿದರು.

Advertisements
1000533206

ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದಲ್ಲಿ ಕಳೆದ ಒಂಭತ್ತು ದಿನಗಳ ಕಾಲ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ನಮ್ಮ ಸಂಸ್ಕೃತಿಯನ್ನು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮುನ್ನೆಡೆಸುವುದು ದಸರಾ ವಿವಿಧ ಕಾರ್ಯಕ್ರಮಗಳ ಉದ್ದೇಶವಾಗಿದೆ. ಮಾನಸಿಕ ದೃಢತೆಯಷ್ಟೆ ದೈಹಿಕ ಸದೃಢತೆ ಮುಖ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತಿದೆ. ದೈಹಿಕ ಸಾಮರ್ಥ್ಯ ಬಲಗೊಳ್ಳಲು ಪ್ರತಿಯೊಬ್ಬರೂ ಆಟೋಟಗಳಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಸುಸ್ಥಿರತೆ ಕಾಪಾಡಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

ಮಿನಿ ಮ್ಯಾರಾಥಾನ್ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಆರಂಭವಾಗಿ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅಂತ್ಯವಾಯಿತು.

1000533192

ಪುರಷರ ವಿಭಾಗದಲ್ಲಿ 10 ಕಿ.ಮೀ ಹಾಗೂ ಮಹಿಳೆಯರ ವಿಭಾಗದಲ್ಲಿ 6 ಕಿ.ಮೀ ಓಟ ಇದ್ದು, ಆರು ಸ್ಥಾನಗಳ ವಿಜೇತರಿಗೆ ನಗದು ಬಹುಮಾನ ವಿತರಿಸಲಾಯಿತು.

ಮ್ಯಾರಥಾನ್ ವಿಜೇತರ ಪಟ್ಟಿಪುರುಷರ ವಿಭಾಗ ಕ್ರಮವಾಗಿಗುರುಪ್ರಸಾದ್, ತುಮಕೂರು (ರೂ. 10 ಸಾವಿರ)ಸಂದೀಪ್ ಟಿ.ಎಸ್. ತುಮಕೂರು (ರೂ. 8 ಸಾವಿರ)ವೆಂಕಟೇಶ್ ಕೆ.ಕೆ. ಬೆಂಗಳೂರು (ರೂ. 6 ಸಾವಿರ)ಮಣಿಕಂಠ ಪಿ. ಮೈಸೂರು (ರೂ.4 ಸಾವಿರ)ಲಕ್ಷ್ಮಿಶ್ ಸಿ.ಎಸ್. ಬೆಂಗಳೂರು (ರೂ. 2 ಸಾವಿರ)ಅವಧೀಶ್ ನಿಷಾದ್, ತುಮಕೂರು (ರೂ. 2 ಸಾವಿರ)

ಮಹಿಳೆಯರ ವಿಭಾಗ, ಕ್ರಮವಾಗಿಡಿ.ಆರ್. ಸ್ಮಿತಾ, ಬೆಂಗಳೂರು (ರೂ. 10 ಸಾವಿರ)ರಾಶಿ ಎಂ. ಬೆಂಗಳೂರು (ರೂ.8 ಸಾವಿರ)ಪ್ರಿಯಾಂಕ, ಬೆಂಗಳೂರು (ರೂ.6 ಸಾವಿರ)ಜಯಶ್ರೀ ಎಸ್. ಮೈಸೂರು (ರೂ. 4 ಸಾವಿರ)ಸಾನಿಕಾ ಎಸ್.ಎಂ. ತುಮಕೂರು (ರೂ.2 ಸಾವಿರ)ಸೌಮ್ಯ ಎಂ. ಬೆಂಗಳೂರು (ರೂ. 2 ಸಾವಿರ)

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X