ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣ | ಕಿಂಗ್‌ಪಿನ್ ಸೌರಭ್ ಚಂದ್ರಕರ್ ದುಬೈನಲ್ಲಿ ಬಂಧನ

Date:

Advertisements

ಬಹುಕೋಟಿ ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಕಿಂಗ್‌ಪಿನ್ ಸೌರಭ್ ಚಂದ್ರಕರ್ ಅನ್ನು ದುಬೈನಲ್ಲಿ ಬಂಧಿಸಲಾಗಿದೆ. ಈ ಹಗರಣದಲ್ಲಿ ಮನಿ ಲಾಂಡರಿಂಗ್ ಮಾಡಿದ ಆರೋಪದಲ್ಲಿ ಯುಎಇ ಅಧಿಕಾರಿಗಳು ಮಾಸ್ಟರ್ ಮೈಂಡ್ ಸೌರಭ್ ಅನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಜಾರಿ ನಿರ್ದೇಶನಾಲಯವು (ಇಡಿ) ಶೀಘ್ರವೇ ಸೌರಭ್ ಚಂದ್ರಕರ್ ಹಸ್ತಾಂತರ ಕಾರ್ಯವನ್ನು ನಡೆಸುವ ನಿರೀಕ್ಷೆಯಿದೆ. ಗುರುವಾರ ಬಂಧನದ ಬಗ್ಗೆ ತನಿಖಾ ಸಂಸ್ಥೆಗೆ ಮಾಹಿತಿ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಸುಮಾರು 10,000 ಕೋಟಿ ರೂಪಾಯಿಗಳ ಹಗರಣ ಇದಾಗಿದೆ.

ಇದನ್ನು ಓದಿದ್ದೀರಾ? ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ

Advertisements

ಮಹಾದೇವ್ ಆ್ಯಪ್ ಮೂಲಕ ಸುಮಾರು 1,100 ಕೋಟಿ ರೂಪಾಯಿಯಷ್ಟು ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ಈ ವರ್ಷದ ಆರಂಭದಲ್ಲಿ ಇಡಿ ಆರೋಪಿಸಿದೆ. ಜೊತೆಗೆ ಈ ಹಗರಣವನ್ನು ಮಾಡಲು ಸಾವಿರಾರು ಸಿಮ್ ಕಾರ್ಡ್‌ಗಳು, ಬೇರೆ ಬೇರೆ ವಿಧಾನಗಳನ್ನು ಬಳಸಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಅಪ್ಲಿಕೇಶನ್ ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳಿಗೆ ಪ್ರವೇಶವನ್ನು ಒದಗಿಸುತ್ತದೆ ಎಂದು ಆರೋಪಿಸಲಾಗಿದೆ.

ಮಹಾದೇವ್ ಆ್ಯಪ್ ದುಬೈನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬುದು ಇಡಿ ತನಿಖೆಯ ವೇಳೆ ಬಹಿರಂಗವಾಗಿದೆ. ಈ ಹಗರಣಕ್ಕೆ ಸಂಬಂಧಿಸಿ 2023ರಲ್ಲಿ ರವಿ ಉಪ್ಪಲ್ ಎಂಬಾತನನ್ನು ದುಬೈನಲ್ಲಿ ಅಲ್ಲಿಯ ಸ್ಥಳೀಯ ಅಧಿಕಾರಿಗಳು ಬಂಧಿಸಿದ್ದರು. ಇಡಿ ಮನವಿಯ ಮೇರೆಗೆ ಈ ಬಂಧನ ಮಾಡಲಾಗಿತ್ತು.

ಇಡಿ ಈವರೆಗೆ ಈ ಪ್ರಕರಣದಲ್ಲಿ ಒಟ್ಟು 11 ಮಂದಿಯನ್ನು ಬಂಧಿಸಿದೆ. ಸಂಸ್ಥೆಯು ಇಲ್ಲಿಯವರೆಗೆ ಎರಡು ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವು ನಟ, ನಟಿಯರಿಗೆ ಸಮನ್ಸ್ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X