ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಗ್ಗೆ 11ಗಂಟೆಯವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.
ಮೇ 20 ಹಾಗೂ 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪೋಷಕರ ಮನವಿಯ ಆಧಾರದ ಮೇರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ಹಾಗು ಅಂತಿಮ ಅವಕಾಶವನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ http://kea.kar ಭೇಟಿ ನೀಡಿ.
ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಇಲ್ಲಿಯವರೆಗೆ ಸಿಇಟಿ-2023ಕ್ಕೆ ನೋಂದಣಿ ಮಾಡದಿರುವ ಅಥವಾ ನೋಂದಣಿ ಮಾಡಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಮೇ.11 ಬೆಳಗ್ಗೆ 8.00 ರಿಂದ ಮೇ.13 ಬೆಳಗ್ಗೆ 11.00 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ.13ರ ಸಂಜೆ 6.00 ರೊಳಗೆ ಶುಲ್ಕವನ್ನು ಪಾವತಿಸಬೇಕು.

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಅಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಿಇಟಿಗೆ ಬರೆಯಬೇಕು. ಪರೀಕ್ಷೆಗೆ ಹಾಜರಾದರೆ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆ ಅಂಕಗಳನ್ನು ಪರಿಗಣಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ