ತಮಿಳುನಾಡಿನ ತಿರುಚಿರಾಪಳ್ಳಿಯಿಂದ ದುಬೈಯ ಶಾರ್ಜಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿರುವುದಾಗಿ ವರದಿಯಾಗಿತ್ತು. ಪೈಲಟ್ ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
“ತಿರುಚಿರಾಪಳ್ಳಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಐಎಕ್ಸ್ 613 ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಎಂಒಸಿಎ ತಿಳಿಸಿದೆ.
“ಲ್ಯಾಂಡಿಂಗ್ ಗೇರ್ ತೆರೆದಿದ್ದು, ವಿಮಾನವು ಸಾಮಾನ್ಯವಾಗಿ ಇಳಿಯಿತು. ವಿಮಾನ ನಿಲ್ದಾಣವನ್ನು ಅಲರ್ಟ್ ಮೋಡ್ ನಲ್ಲಿ ಇರಿಸಲಾಗಿದೆ” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೂ ಏನೂ ಆಗಿಲ್ಲ” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ತಿರುಚಿರಾಪಳ್ಳಿ 144 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಉಂಟಾಗಿ, ಇಂಧನ ಖಾಲಿ ಮಾಡಲು ಆಗಸದಲ್ಲಿ ಎರಡು ಗಂಟೆಗಳಿಂದ ಹಾರಾಟ ನಡೆಸುತ್ತಿರುವುದಾಗಿ ವರದಿಯಾಗಿತ್ತು.
ಹೀಗಾಗಿ, ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು ತಪ್ಪಿಸಲು, ವಿಮಾನವು ಅದರ ಇಂಧನ ಲೋಡ್ ಅನ್ನು ಕಡಿಮೆ ಮಾಡಿದ ನಂತರ ತುರ್ತು ಭೂಸ್ಪರ್ಶಕ್ಕೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ವಾಹನಗಳನ್ನು ಪೂರ್ವ ಸಿದ್ಧತೆಯಲ್ಲಿ ಇರಿಸಲಾಗಿತ್ತು. ಸಂಭವನೀಯ ಬೆಲ್ಲಿ ಲ್ಯಾಂಡಿಂಗ್‌ಗೆ ಸಿದ್ಧತೆಗಳನ್ನು ಮಾಡಲಾಗಿತ್ತು.
ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ ಪೈಲಟ್
ತಿರುಚಿರಾಪಳ್ಳಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಐಎಕ್ಸ್ 613 ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಎಂಒಸಿಎ ತಿಳಿಸಿದೆ.
