ಹೊಲದಲ್ಲಿ ಕುಳಿತು ಊಟ ಸೇವಿಸಿದ್ದ ಒಂದೇ ಕುಟುಂಬದ ಏಳು ಮಂದಿ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬೆಳಗ್ಗೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಎಲ್ಲರೂ ಒಟ್ಟಾಗಿ ಸೇರಿ ಊಟ ಮಾಡಿದ್ದಾರೆ. ಬೆಂಡೆಕಾಯಿ , ಜೋಳದ ರೊಟ್ಟಿ ಸೇವಿಸಿದ್ದಾರೆ ಎನ್ನಲಾಗಿದೆ.
ಏಕಾಏಕಿ ಎಲ್ಲರಲ್ಲಿ ವಾಂತಿ ಭೇದಿ ಶುರುವಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ಓದಿದ್ದೀರಾ? ಉಡುಪಿ | ಅಂಬೇಡ್ಕರ್, ದಲಿತರಿಗೆ ಅವಮಾನಿಸಿದ ಸಂಘಪರಿವಾರದ ಮುಖಂಡ ಉಮೇಶ್ ನಾಯ್ಕ: ಬಂಧನಕ್ಕೆ ದಲಿತ ಮುಖಂಡರ ಆಗ್ರಹ
ಲಕ್ಷ್ಮೀ, ಮಾಳಪ್ಪ, ಬಸವಲಿಂಗಪ್ಪ, ಗೌರಮ್ಮ ಸೇರಿ ಒಂದೇ ಕುಟುಂಬದ ಏಳು ಜನರು ಅಸ್ವಸ್ಥರಾಗಿದ್ದಾರೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಗ್ರಾಮಸ್ಥರು ಕಲುಷಿತ ನೀರಿನಿಂದಾಗಿ ಈ ರೀತಿಯ ಘಟನೆ ಆಗಿದೆ ಎಂದು ಆರೋಪಿಸಿದ್ದಾರೆ.
