ಉಡುಪಿ | ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

Date:

Advertisements

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಸಿಕೊಂಡು ಬಂದು, ಕಾರ್ಮಿಕರಾಗಿ ದುಡಿಯುತ್ತಿದ್ದ ಏಳು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ನಡೆದಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದನು.

ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆಯ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

Advertisements
ಉಡುಪಿ

ಹಕೀಂ ಅಲಿ, ಸುಜೋನ್, ಇಸ್ಮಾಯೀಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಇಲ್ಲಿ ತಂಗಿದ್ದರು ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ವಿಶೇಷ | ಉದಯನಿಧಿ-ಪವನ್ ಕಲ್ಯಾಣ್: ಇಬ್ಬರಿಗೂ ‘ಸನಾತನ’ವೇ ಸರಕು

ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X