ಧಾರವಾಡ | ಧಾರಾಕಾರ ಮಳೆಗೆ ಅಪಾರ ಆಸ್ತಿಪಾಸ್ತಿ ಹಾನಿ; ಸ್ಥಳೀಯರಲ್ಲಿ ಪ್ರವಾಹ ಭೀತಿ

Date:

Advertisements

ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದ್ದು, ಸ್ಥಳೀಯರು ಬೆಳೆ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿದೆ.

ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಹೆಚ್ಚಿನ ರಸ್ತೆಗಳು ಮತ್ತು ಹೊಲಗಳು ಅಸ್ತವ್ಯಸ್ತವಾಗಿವೆ. ಹಾಗಾಗಿ ಸ್ಥಳೀಯರಿಗೆ ಮನೆಯೊಳಗೇ ಇರುವಂತೆ ಒತ್ತಾಯಿಸಲಾಗಿದೆ. ಬಹುತೇಕ ಎಲ್ಲ ಜಲಮೂಲಗಳು ತುಂಬಿ ಹರಿಯುತ್ತಿದ್ದು, ಜಿಲ್ಲೆಯ ಪ್ರಮುಖ ತೊರೆಗಳಾದ ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಧಾರವಾಡ ಮತ್ತು ನವಲಗುಂದ ತಾಲೂಕಿನ ಹಲವಾರು ಗ್ರಾಮಗಳ ಜನರು ಅಪಾಯದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ.

ಮಳೆ 1 2

ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ನೀರು ಹರಿಯಲು ಯಾವುದೇ ಮಾರ್ಗವಿರಲಿಲ್ಲ. ಈ ಹಿನ್ನೆಲೆಯಲ್ಲಿ ನರೇಂದ್ರ-ಗಬ್ಬೂರು ಬೈಪಾಸ್‌ನಲ್ಲಿ ಸಾಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಯರಿಕೊಪ್ಪ ಕ್ರಾಸ್ ಬಳಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನಡುರಸ್ತೆಯಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೈಪಾಸ್‌ನಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

Advertisements
ಮಳೆ 23

ಭಾರೀ ಮಳೆಯಿಂದಾಗಿ ಜಿಲ್ಲೆಯ ತಗ್ಗು ಪ್ರದೇಶಗಳು ಹಾಗೂ ಮನೆಗಳಿಗೆ ನೀರು ನುಗ್ಗಿದ್ದರಿಂದ ತೊಂದರೆ ಅನುಭವಿಸಬೇಕಾಯಿತು. ಕೆಎಂಎಫ್ ಜಂಕ್ಷನ್, ಕಲಘಟಗಿ ಟೋಲ್ ನಾಕಾ ಸೇರಿದಂತೆ ಹಲವು ಕಡೆಗಳಲ್ಲಿ ರಸ್ತೆ ಜಲಾವೃತಗೊಂಡಿದ್ದರಿಂದ ಧಾರವಾಡ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚರಿಸುವವರು ಎಂದಿನಂತೆ ತೊಂದರೆ ಅನುಭವಿಸಬೇಕಾಯಿತು.

ಮಳೆ 3 1

ಹುಬ್ಬಳ್ಳಿ-ಧಾರವಾಡ, ಕಲಘಟಗಿ, ಅಳ್ನಾವರ, ನವಲಗುಂದ, ಕುಂದಗೋಳದಲ್ಲಿ ಧಾರಾಕಾರ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇದು ಈ ಪ್ರದೇಶದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಳೆ 5 1

ರೈತರಿಗೆ ಸಂಕಷ್ಟ

ಕಳೆದ ವರ್ಷ ಪ್ರವಾಹದಿಂದಾಗಿ ತೊಂದರೆ ಅನುಭವಿಸಿದ ರೈತರು ಮತ್ತೆ ಚಿಂತಿತರಾಗಿದ್ದಾರೆ. ಏಕೆಂದರೆ ಸುಮಾರು 200 ಹೆಕ್ಟೇರ್ ಪ್ರದೇಶದ ಖಾರಿಫ್ ಬೆಳೆಗಳಾದ ವಿಶೇಷವಾಗಿ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಟೊಮೆಟೊ, ಸೋರೆಕಾಯಿ ಮತ್ತು ಈರುಳ್ಳಿ ಬೆಳೆಗಳು ತೀವ್ರ ಹಾನಿಯಾಗಿವೆ. ಇದರ ನಡುವೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆಯೆಂಬ ಮುನ್ಸೂಚನೆ ರೈತರನ್ನು ಮತ್ತಷ್ಟು ಆತಂಕಕ್ಕೀಡುಮಾಡಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಳೆ ನೀರಿನಿಂದ ಆವೃತಗೊಂಡ ಲೋಕೋಪಯೋಗಿ ಇಲಾಖೆ ಕಚೇರಿ!

ಜಿಲ್ಲಾಡಳಿತವು ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(ಎಸ್‌ಡಿಆರ್‌ಎಫ್‌) ಸಿದ್ಧವಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ತಹಶೀಲ್ದಾರರಿಗೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X