ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?: ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ; ಆರೋಪ

Date:

Advertisements

ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆಂದು ಹಲವು ಮಂದಿ ಬೆಟ್ಟಿಂಗ್‌ ಭರಾಟೆಯಲ್ಲಿ ಮುಳುಗಿರುವುದು ಕಂಡುಬಂದಿದೆ.

ಈ ಬಾರಿಯ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೆಂದು ಕೆಲವರು ಬೆಟ್ಟಿಂಗ್‌ ಮಾಡಿದ್ದರೆ, ಇನ್ನೂ ಕೆಲವರು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುರಿತೂ ಬೆಟ್ಟಿಂಗ್‌ ಮಾಡಿದ್ದಾರೆ. ಬೆಟ್ಟಿಂಗ್‌ ಅಖಾಡದಲ್ಲಿ ಹಣ, ಕುರಿ, ಕೋಳಿ, ತೋಟಗಳನ್ನೂ ಪಣಕ್ಕಿಟ್ಟಿರುವುದು ತಿಳಿದುಬಂದಿದೆ.

ಮೈಸೂರು, ಚಾಮರಾಜನಗರ, ತುಮಕೂರು, ಹುಬ್ಬಳ್ಳಿ, ಯಾದಗಿರಿ, ಬೀದರ್, ರಾಯಚೂರು, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಬೆಟ್ಟಿಂಗ್‌ ಜೋರಾಗಿದೆ. ಹಲವರು ಹಣವನ್ನು ಪಣಕ್ಕಿಟ್ಟಿದ್ದರೆ, ಮತ್ತಷ್ಟು ಮಂದಿ ತಮ್ಮ ಬಳಿಯಿರುವ ವಸ್ತುಗಳನ್ನು ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisements

ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಕೈ ಕಾರ್ಯಕರ್ತರೊಬ್ಬರು ತಮ್ಮ ಎರಡು ಎಕರೆ ಭೂಮಿಯನ್ನೇ ಪಣಕ್ಕೆ ಇಟ್ಟಿದ್ದಾರೆ ಎನ್ನಲಾಗಿದೆ. ದೇವದುರ್ಗದಲ್ಲಿ ಜೆಡಿಎಸ್‌ ಅಭ್ಯರ್ಥಿ ಕರೆಮ್ಮ ಗೆಲ್ಲುತ್ತಾರೆಂದು ಅಲ್ಲಿನ ರೈತನೊಬ್ಬ ತನ್ನ ಮೂರು ಎಕರೆ ಜಮೀನನನ್ನು ಪಣಕ್ಕಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಈ ಸುದ್ದಿ ಓದಿದ್ದೀರಾ?: ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

ಇನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆಲ್ಲುತ್ತಾರೆಂದು ಬಸವರಾಜ ಬೆಂಡಿಗೇರಿ ಎಂಬಾತ ತನ್ನ ಮಗನಿಗೆ ‘ವಿನಯ’ ಎಂದು ಹೆಸರಿಟ್ಟಿದ್ದಾರೆ. ವಿನಯ್ ಸೋತರೆ, ತನ್ನ ಮಗನ ಹೆಸರನ್ನು ಬದಲಿಸುವುದಾಗಿ ಹೇಳಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆಂದು ಕಾರ್ಯಕರ್ತನೊಬ್ಬ 10 ಲಕ್ಷ ರೂ. ಬೆಟ್ಟಿಂಗ್ ಮಾಡಿದ್ದಾನೆ. ಆದರೆ, ಜೆಡಿಎಸ್‌ ಪರವಾಗಿ ಅಷ್ಟು ಮೊತ್ತದ ಬೆಟ್ಟಿಂಗ್ ಮಾಡಲು ಯಾರು ಮುಂದೆ ಬಂದಿಲ್ಲವೆಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X