ದೇವರ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ದೇವಿಕ್ಯಾಂಪ್‌ನ ಹೊರವಲಯದ ದೇವಿಗುಡ್ಡದಲ್ಲಿ ನಡೆದಿದೆ.
ದೇವಿ ಕ್ಯಾಂಪ್ ನ ಬೀರೇಶ್ವರ ದೇವಸ್ಥಾನದ ದರ್ಶನ ಪಡೆದು ಗುಡ್ಡದಿಂದ ವಾಪಸಾಗುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳುಗಳ್ನು ಸಿಂಧನೂರು ತಾಲೂಕಿನ ಜಂಬುನಾಥ್ ಹಳ್ಳಿ ಹನುಮಾಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಟ್ರ್ಯಾಕ್ಟರ್ ನಲ್ಲಿ 33 ಜನರಿದ್ದು, ಈ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇದ್ದರು ಎಂದು ಹೇಳಲಾಗಿದೆ.
ಸಣ್ಣಪುಟ್ಟ ಗಾಯಗಳಾದವರನ್ನು ಕಾರಟಗಿ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡ ಜನರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಗಂಗಾವತಿಗೆ ಕಳುಹಿಸಲಾಗಿದೆ. ಗಾಯಗೊಂಡ ಎಲ್ಲರಿಗೂ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ್ದು, ಬಹುತೇಕರು ಮನೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
