ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.19ರವರೆಗೆ ಧಾರಾಕಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Date:

Advertisements

ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಹಾವೇರಿ, ಬೆಳ್ಳೂರು, ಭದ್ರಾವತಿ, ನಾಗಮಂಗಲ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಕುಕನೂರು, ಇಳಕಲ್, ಕೂಡಲಸಂಗಮ, ಬಿಳಗಿ, ಗದಗ, ಲಕ್ಷ್ಮೇಶ್ವರ, ಬೈಲಹೊಂಗಲ, ಗುತ್ತಲ್, ಆಲಮಟ್ಟಿ, ಗೋಕಾಕ್​, ಹರಪನಹಳ್ಳಿ, ಚನ್ನರಾಯಪಟ್ಟಣ, ದಾವಣಗೆರೆಯಲ್ಲಿ ಮಳೆಯಾಗಿದೆ.

ಪಣಂಬೂರು, ಅಣ್ಣಿಗೆರೆ, ಕುಂದಗೋಳ, ಹಿರೇಕೆರೂರು, ಮುನಿರಾಬಾದ್, ಹಾವೇರಿ, ಕುಷ್ಟಗಿ, ಬಾದಾಮಿ, ಯಡವಾಡ, ಕಲಬುರಗಿ, ಚಾಮರಾಜನಗರ, ಶ್ರವಣಬೆಳಗೊಳ, ತಿಪಟೂರು, ಹೊಸದುರ್ಗ, ಕೃಷ್ಣರಾಜಪೇಟೆ, ಹೊನ್ನಾಳಿ, ಬೇಲೂರು, ತರೀಕೆರೆಯಲ್ಲಿ ಮಳೆಯಾಗಿದೆ. ಹಳಿಯಾಳ, ಕಾರ್ಕಳ, ಮಂಗಳೂರು, ಸೇಡಬಾಳ, ಶ್ರೀರಂಗಪಟ್ಟಣ, ನಂಜನಗೂಡು, ಬೇಗೂರು, ಯುಗಟಿ, ಮೈಸೂರು, ಸರಗೂರು, ಕಿರವತ್ತಿ, ಧಾರವಾಡ, ಕೆಆರ್​ನಗರ, ಯಲ್ಲಾಪುರ, ಧರ್ಮಸ್ಥಳ, ಕಲಘಟಗಿ, ಶಿರಹಟ್ಟಿ, ವಿಜಯಪುರ, ಚಿಕ್ಕೋಡಿ, ಸೇಡಂ, ನಿಪ್ಪಾಣಿಯಲ್ಲಿ ಮಳೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X