ಖಾಸಗಿ ಕಟ್ಟಡದ ನಿರ್ಮಾಣದ ವೇಳೆ ಗೋಎ ಕುಸಿದು ಬಿದ್ದಿದ್ದು, 9 ಮಂದಿ ಕಾರ್ಮಿಕರ ಸಾವನ್ನಪ್ಪಿರುವ ದುರ್ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜಸಾಲ್‌ಪುರದಲ್ಲಿ ನಡೆದಿದೆ. ಅವಶೇಷಗಳ ಅಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಂಪನಿಯನ್ನು ತೆರೆಯುವ ಉದ್ದೇಶಕ್ಕಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಂದಿದ್ದೆ. ಅವಶೇಷಗಳ ಅಡಿಯಲ್ಲಿ 9-10 ಜನರು ಸಿಕ್ಕಿಬಿದ್ದಿದ್ದಾರೆ. ಅವರಲ್ಲಿ, 6 ಮಂದಿ ಯುವಕರ ಮೃತದೇಹವನ್ನು ಹೊರಗೆಯಲಾಗಿದೆ. ಒಬ್ಬರು ಬದುಕುಳಿದಿದ್ದಾರೆ. ಅವರನ್ನು ರಕ್ಷಿಸಲಾಗಿದೆ. ಉಳಿದವರ ಮೃತದೇಹ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಗುಜರಾತ್‌ನ ಮೆಹ್ಸಾನಾದಲ್ಲಿ ಗೋಡೆ ಕುಸಿತದಿಂದ ಉಂಟಾದ ಅಪಘಾತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ” ಎಂದು ಟ್ವೀಟ್ ಮಾಡಿದ್ದಾರೆ.