5 ಎಕರೆ ಹಿಂತಿರುಗಿಸಲು ನಿರ್ಧರಿಸಿದ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ​ ಟ್ರಸ್ಟ್​

Date:

Advertisements

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್‌ ಖರ್ಗೆ ನೇತೃತ್ವದ ‘ಸಿದ್ಧಾರ್ಥ ವಿಹಾರ ಟ್ರಸ್ಟ್‌’ಗೆ ಬೆಂಗಳೂರಿನ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಐದು ಎಕರೆ ನಾಗರಿಕ ಬಳಕೆ (ಸಿ.ಎ) ನಿವೇಶನ ಹಂಚಿಕೆ ವಿಚಾರಕ್ಕೆ ವಿವಾದ ಸೃಷ್ಟಿಯಾಗಿದ್ದ ಬೆನ್ನಲ್ಲೇ ಸಿ.ಎ. ನಿವೇಶನವನ್ನು ಹಿಂದಿರುಗಿಸುವ ನಿರ್ಧಾರವನ್ನು ಟ್ರಸ್ಟ್‌ ತೆಗೆದುಕೊಂಡಿದೆ. 

ಹಂಚಿಕೆಯಾಗಿರುವ ಸಿ.ಎ. ನಿವೇಶನವನ್ನು ಟ್ರಸ್ಟ್‌ ಎರಡು ದಿನಗಳ ಹಿಂದೆ ವಾಪಸ್‌ ಪಡೆಯಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಬೆಂಗಳೂರಿನ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಸಿ.ಎ ನಿವೇಶನ ಹಂಚಿಕೆ ಪ್ರಕ್ರಿಯೆ ಈ ಹಿಂದೆ ನಡೆದಿತ್ತು. ಸಿ.ಎ ನಿವೇಶನಕ್ಕಾಗಿ ಕೆಐಎಡಿಬಿಗೆ ಒಟ್ಟು 193 ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದವು. ಅದರಲ್ಲಿ 43 ಸಂಸ್ಥೆಗಳು ಆಯ್ಕೆಯಾಗಿದ್ದವು. ಆ ಪೈಕಿ ಅಂತಿಮವಾಗಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಸಿ.ಎ ನಿವೇಶನ ಹಂಚಿಕೆಯಾಗಿತ್ತು. ಆದರೆ ಹಂಚಿಕೆ ಪ್ರಕ್ರಿಯೆ ಬಗ್ಗೆ ಅಪಸ್ವರಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿತ್ತು.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬದ ಟ್ರಸ್ಟ್​ಗೆ ನೀಡಲಾಗಿದ್ದ ಸೈಟ್​ ಹಿಂದಿರುಗಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್​​ಗೆ ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ವಿಚಾರದಲ್ಲಿ ಟ್ರಸ್ಟ್ ಅಧ್ಯಕ್ಷ ರಾಹುಲ್​ಗೆ ಮಾಹಿತಿ ಇರಲಿಲ್ಲ ಅನಿಸುತ್ತದೆ. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ನಮ್ಮ ಅಣ್ಣ ಅವರು ಮೃದು ಸ್ವಭಾವದವರು. ಅವರಿಂದ ಕುಟುಂಬದ ಸದಸ್ಯರರಿಗೆ ಹಿಂಸೆ ಆಗುತ್ತಿದೆ ಎಂದು ನೊಂದಿದ್ದಾರೆ. ಹೀಗಾಗಿ ಸೆಪ್ಟೆಂಬರ್ 29 ರಂದು ಅವರು ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ಸೈಟ್ ಕೊಟ್ಟಿರೋದನ್ನ ಕಾನೂನಾತ್ಮಕ ವಾಗಿ ಮರಳಿ‌ ನೀಡುತ್ತಿದ್ದೇವೆ ಎಂದು ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಟ್ರಸ್ಟ್ ಅಧ್ಯಕ್ಷ ರಾಹುಲ್‌ ಖರ್ಗೆ ಅವರಿಗೆ ಹೆಚ್ಚು ಅರಿವು ಇರಲಿಲ್ಲ ಅನ್ಸುತ್ತೆ. ಅವರಿಗೆ ಕೇಂದ್ರದಿಂದ ಸಾಕಷ್ಟು ಅವಾರ್ಡ್ ಸಿಕ್ಕಿದೆ. ಯುಪಿಎಸ್ಇನಲ್ಲೂ ರ್ಯಾಂಕ್ ಬಂದಿದ್ರು. ಯುರೋಸ್ಪೇಸ್ ನಲ್ಲಿ ಜಾಗ ಬೇಕು ಅಂತ ಅರ್ಜಿ ಹಾಕಿದ್ದರು. ಅದರ ಅನ್ವಯ ಅವರಿಗೆ ಸೈಟ್ ಅಲರ್ಟ್​​ ಆಗಿದೆ. ಸಂಪೂರ್ಣ ದಾಖಲೆ ಆಧಾರದ‌ ಮೇಲೆ ಸೈಟ್ ಸಿಕ್ಕಿದೆ. ಇಲ್ಲಿ ತರಾತುರಿಯಲ್ಲಿ ಏನು ಆಗಿಲ್ಲ ಎಂದು ಸಮಜಾಯಿಷಿ ನೀಡಿದರು.

ಸಿಎ ಸೈಟ್ ತೆಗೆದುಕೊಳ್ಳುವ ಬಗ್ಗೆ ರಾಹುಲ್ ಖರ್ಗೆ ನಿರ್ಧಾರ ಮಾಡಿದ್ದರು. ಈಗ ಅವರೇ ಇಷ್ಟ ಇಲ್ಲ ಎಂದು ಮರಳಿ ನೀಡಿದ್ದಾರೆ. ರಾಹುಲ್ ಖರ್ಗೆ ಯಾರು ಅಂತ ಯಾರಿಗೂ ಗೊತ್ತಿಲ್ಲ. ಕಷ್ಟ ಪಟ್ಟು ರಾಹುಲ್‌ ಖರ್ಗೆ ಯುಪಿಎಸ್ ಇ ಪಾಸ್ ಆಗಿದ್ದಾರೆ. ಕಷ್ಟ ಪಟ್ಟು ನಮ್ಮ ಕುಟುಂಬದಲ್ಲಿ ರಾಹುಲ್‌ ಖರ್ಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇದೊಂದು ರಾಜಕೀಯ ಆರೋಪ ಅಷ್ಟೇ. ಆದರೆ ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ರಾಹುಲ್ ಖರ್ಗೆ ನಮ್ಮ ರೀತಿ ಅಲ್ಲ. ಅವರು ಮೃದು ಸ್ವಭಾವದವರು. ಬಿಜೆಪಿಯವರು ಮನುಸ್ಕೃತಿ ಸಭಾವದವರು. ಬಿಜೆಪಿ ನಾಯಕರ ಮಕ್ಕಳನ್ನ ಆರ್‌ಎಸ್‌ಎಸ್‌ಗೆ ಕಳಿಸೋದಿಲ್ಲ. ನಮಗೆ ಸದಾ ಕಾಲ ವೈಯಕ್ತಿಕವಾಗಿ ದಾಳಿ‌ ಮಾಡುತ್ತಾರೆ. ಚುಚ್ಚು ಮಾತುಗಳನ್ನ ತೇಜೋವಧೆ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಿದ್ದರಾಮಯ್ಯ ಸೈಟ್ ವಾಪಸ್ ಕೊಟ್ಟರು, ಖರ್ಗೆ ಕುಟುಂಬ ಸಿದ್ಧಾರ್ಥ ಟ್ರಸ್ಟ್ ಗೆ ಪಡೆದಿದ್ದ ಜಮೀನು ವಾಪಸ್ ಕೊಡುವಂತೆ,, ಹಾಗಾದ್ರೆ ಬಿಜೆಪಿ ಯ ಕೆಲವರು ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ ಇತರೆ ಕಾರಣಗಳಿಗಾಗಿ ಸರಕಾರಿ ಮತ್ತು ಸಿ ಎ ಸೈಟುಗಳನ್ನು ವಾಪಸ್ ನೀಡುವರಾ,,, ಅವರನ್ನು ಕೇಳಲು ಬಕೆಟ್ ಮಾಧ್ಯಮಗಳಿಗೆ ತಾಕತ್ತು ಇದೆಯಾ,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X