ಉಡುಪಿ | ಅಂಬೇಡ್ಕ‌ರ್, ದಲಿತರಿಗೆ ಅವಹೇಳನ; ಹಿಂಜಾವೇ ಮುಖಂಡ ಉಮೇಶ್ ನಾಯ್ಕ್‌ ಸೂಡ ಬಂಧನ

Date:

Advertisements

ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಉಮೇಶ್ ನಾಯ್ಕ್ ಸೂಡನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.

“ಉಮೇಶ್ ನಾಯ್ಕ ಸೂಡನನ್ನು ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ತಿಳಿಸಿದ್ದಾರೆ.

ಹಿಂದೂ ಜಾಗರಣ ವೇದಿಕೆ(ಹಿಂಜಾವೇ)ಯ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಸಹ ಸಂಚಾಲಕ ಉಮೇಶ್ ನಾಯ್ಕ್ ದಕ್ಷಿಣ ಕನ್ನಡ ಮರಾಠಿ ಸಂರಕ್ಷಣಾ ಸಮಿತಿಯ ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಆಡಿಯೋ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಉಮೇಶ್‌ ನಾಯ್ಕನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ದಸಂಸ ಹಾಗೂ ದಲಿತ ಸಂಘ ಟನೆಗಳು ಅಲ್ಲಲ್ಲಿ ಪೊಲೀಸರಿಗೆ ಮನವಿಗಳನ್ನು ಸಲ್ಲಿಸಿ ಒತ್ತಾಯಿಸಿದ್ದವು. ಈ ನಡುವೆ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ.

Advertisements

“ಆತನ ಮೇಲೆ ಭಾರತೀಯ ನ್ಯಾಯ ಸಂಹಿತೆ -2023ರ 353(2)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್‌ 10ರಂದು ದ ಕ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗದ್ದಿಗೆ ಕರಾವಳಿ ಮರಾಠಿ ಸಮಾವೇಶ-2024ನ್ನು ಆಯೋಜಿಸಿದ್ದು, ಈ ಸಮಾವೇಶದ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಅಂಬೇಡ್ಕರ್ ಫೋಟೊ ಮುದ್ರಿಸಿರುವುದು ಉಮೇಶ್ ನಾಯ್ಕನ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೇ ನೆಪವಾಗಿರಿಸಿಕೊಂಡು ಅಂಬೇಡ್ಕರ್ ಹಾಗೂ ದಲಿತರನ್ನು ಅವಮಾನಿಸಿ ಉಮೇಶ್ ನಾಯ್ಕ ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್ ಮೆಸೇಜ್ ಹರಿಯಬಿಟ್ಟಿರುವುದಾಗಿ ವರದಿಯಾಗಿತ್ತು.

ಉಮೇಶ ನಾಯ್ಕನದೆನ್ನಲಾದ ವೈರಲ್ ಆಡಿಯೋದಲ್ಲಿ “ಮರಾಠಿಗರು ದಲಿತರಲ್ಲ. ಆಮಂತ್ರಣ ಪತ್ರಿಕೆಯ ಅಂಬೇಡ್ಕರ್ ಫೋಟೊ ತೆಗೆದು ಶಿವಾಜಿಯ ಫೋಟೊ ಹಾಕಬೇಕು. ದಲಿತರು ದನದ ಹಾಗೂ ಕೋಣದ ಮಾಂಸ ತಿನ್ನುವವರು. ಸ್ಮಶಾನದಲ್ಲಿ ಮಲಗುವವರು. ಅಂಬೇಡ್ಕರ್ ಫೋಟೊ ಹಾಕಲು ಆತ ನಿಮ್ಮ ಅಪ್ಪನೇ. ಅಂಬೇಡ್ಕರ್ ಫೋಟೊ ತೆಗೆದು ಶಿವಾಜಿ ಪೋಟೊ ಹಾಕದಿದ್ದರೆ ಕರಾವಳಿ ಮರಾಠಿ ಸಮಾವೇಶಕ್ಕೆ ಬಹಿಷ್ಕಾರ ಹಾಕುತ್ತೇವೆ” ಎಂದು ಬೆದರಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಅಕ್ರಮ ಖಾತೆ ರದ್ದುಪಡಿಸುವಂತೆ ಆಗ್ರಹ; ಡಿಎಸ್ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ

ಉಮೇಶ ನಾಯ್ಕನ ಹೇಳಿಕೆ ವೈರಲ್ ಆಗುತ್ತಿದ್ದಂತೆ ಆತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯು ಎಸ್‌ಪಿ ಅನುಪಸ್ಥಿತಿಯಲ್ಲಿ ಉಡುಪಿ ಪೊಲೀಸ್ ಉಪಾಧೀಕ್ಷಕ ಡಿ ಟಿ ಪ್ರಭುರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಶಾಮರಾಜ ಬಿರ್ತಿ, ಮಂಜುನಾಥ ಗಿಳಿಯಾರು, ಶಾಮಸುಂದರ ತೆಕ್ಕಟ್ಟೆ, ಕುಮಾರ್ ಕೋಟ, ಹರಿಶ್ಚಂದ್ರ ಕೆ ಡಿ, ಶಿವಾನಂದ ಬಿರ್ತಿ, ಶಿವಾನಂದ ಮೂಡಬೆಟ್ಟು ಮುಂತಾದವರು ನಿಯೋಗದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X