ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯಗೈದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಅಪಾರ್ಟ್ಮೆಂಟ್ ಹೊರಗಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಿದ್ದಿಕ್ ಅವರನ್ನು ಹತ್ಯೆ ಮಾಡಿದ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ತಿಳಿಸಿದೆ. ತನ್ನ ಅಂತಿಮ ಗುರಿ ಸಲ್ಮಾನ್ ಖಾನ್ ಆಗಿದ್ದು, ಅವರೊಂದಿಗೆ ಸಿದ್ದಿಕ್ ಸ್ನೇಹ ಹೊಂದಿದ್ದರಿಂದಲೇ ಅವರನ್ನು ಹತ್ಯೆಗೈದಿರುವುವಾಗಿ ಗ್ಯಾಂಗ್ ಹೇಳಿಕೊಂಡಿದೆ.
ಶನಿವಾರ ರಾತ್ರಿ, ಸಿದ್ದಿಕ್ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ್ದ ಸಲ್ಮಾನ್ ಖಾನ್ ಸಿದ್ದತ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ಹಿಂದೆ, ಮುಂಬೈನ ಬಾಂದ್ರಾದಲ್ಲಿರವು ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಏಪ್ರಿಲ್ 14 ರಂದು ಬೈಕ್‌ನಲ್ಲಿದ್ದ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಆರೋಪಿಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ, ಸಲ್ಮಾನ್ ಖಾನ್ ಅವರಿಗೆ ಮುಂಬೈ ಪೊಲೀಸರು ಭದ್ರತೆ ನೀಡಿದ್ದರು.
ಇದೀಗ, ಸಲ್ಮಾನ್ ಖಾತ್ ಅವರ ಆಪ್ತರಾಗಿದ್ದ ಸಿದ್ಧಿಕ್ ಅವರನ್ನು ಹತ್ಯೆಗೈದಿರುವ ಬೆನ್ನಲ್ಲೇ ಖಾನ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿದ್ದಕ್ ಹತ್ಯೆ ಸಂಬಂಧ ಭಾರತೀಯ ನ್ಯಾಯ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ವಿವಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಿದ್ದಿಕ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರವಿವಾರ ಘೋಷಿಸಿದ್ದಾರೆ.