ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ; ಹಲವರು ಪೊಲೀಸ್‌ ವಶಕ್ಕೆ

Date:

Advertisements

ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಾನುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಬಿಜೆಪಿ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಡನೆಸಿದ್ದಾರೆ. ಅವರೆಲ್ಲರಲ್ಲೂ ವಶಕ್ಕೆ ಪಡೆದಿರುವ ಪೊಲೀಸರು ಹಳೇ ಸಿಎಆರ್‌ ಮೈದಾನಕ್ಕೆ ಕರೆದೊಯ್ದಿದ್ದಾರೆ.

ಪೊಲೀಸ್‌ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ, ಎಲ್ಲರನ್ನೂ ಬಿಡುಗಡೆ ಮಾಡಿದ್ದಾರೆ.

Advertisements

ಬಳಿಕ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಒಳಗೊಂಡಂತೆ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಅಕ್ಷಯ ಪಾರ್ಕ್‌ ವೃತ್ತದಲ್ಲಿ ಧರಣಿ ನಡೆಸಿದ್ದಾರೆ. ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯುವ ನಿರ್ಧಾರ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X