ಗುಬ್ಬಿ | ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ : ಅದ್ದೂರಿ ಆಚರಣೆಗೆ ನಾಗರೀಕರ ಸಹಕಾರಕ್ಕೆ ಮನವಿ.

Date:

Advertisements

ಪ್ರತಿ ವರ್ಷದಂತೆ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಗುಬ್ಬಿ ನಾಗರೀಕರ ಸಹಕಾರ ಅತ್ಯಗತ್ಯ ಎಂದು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೈಭವಯುತ ಆಚರಣೆಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಶಿಷ್ಟಾಚಾರ ಅನುಸಾರವಾಗಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿ ವರ್ಷದಂತೆ ವೇದಿಕೆ ನಿರ್ಮಿಸಿ ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವ ಮೂಲಕ ಅರ್ಥಪೂರ್ಣ ದಿನಾಚರಣೆ ಆಚರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪೊಲೀಸರು, ಗೃಹರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್, ಮಾಜಿ ಸೈನಿಕರು ಹಾಗೂ ಶಾಲಾ ಮಕ್ಕಳು ಆಕರ್ಷಕ ಕವಾಯತು ನಡೆಸಲಾಗುವುದು. ಮೂಲಭೂತ ಸೌಕರ್ಯಗಳಾದ ನೀರು, ನೆರಳು ವ್ಯವಸ್ಥೆ ಹಾಗೂ ಸಿಹಿ ಉಪಹಾರ ಹಂಚಿಕೆ, ಕನ್ನಡ ಧ್ವಜ, ಶಾಲು, ಶಲ್ಯ ಹಂ ಹಾಗೂ ಕಾರ್ಯಕ್ರಮದ ಪೋಟೋ ವಿಡಿಯೋ ಚಿತ್ರೀಕರಣ ಹೀಗೆ ಅನೇಕ ಜವಾಬ್ದಾರಿಯನ್ನು ಇಲಾಖೆವಾರು ಹಂಚಲಾಗುವುದು ಎಂದು ತಿಳಿಸಿದ ಅವರು ಈ ಸರ್ಕಾರಿ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಖುದ್ದು ಹಾಜರಾಗಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಿದರು.

Advertisements

ಇದೇ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆಗೆ 9 ಕ್ಷೇತ್ರಗಳಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಶಿಕ್ಷಣ, ಕೃಷಿ, ಪರಿಸರ, ವೈದ್ಯಕೀಯ, ರಂಗಭೂಮಿ, ಸಾಹಿತ್ಯ, ಜನಪದ, ಸಮಾಜ ಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಆಯ್ಕೆ ಮಾಡಿ ಸನ್ಮಾನಿಸಿ ಪ್ರಶಸ್ತಿ ನೀಡಲಾಗುವುದು. ಸಾಧನೆ ಮಾಡಿದ ಗಣ್ಯರು ಇದೇ ತಿಂಗಳ 25 ರೊಳಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದ್ದು ತಾಲ್ಲೂಕು ಪಂಚಾಯಿತಿ ಇಓ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ, ಪಪಂ ಸದಸ್ಯ ಜಿ. ಆರ್. ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಯತೀಶ್ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ವರದಿ -ಎಸ್. ಕೆ. ರಾಘವೇಂದ್ರ ಗುಬ್ಬಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X