ಮೈಸೂರು | ದಸರಾ ಜಂಬೂ ಸವಾರಿ ವೇಳೆ ಕರ್ತವ್ಯ ನಿರತ ಪತ್ರಕರ್ತರ ಮೇಲೆ ಪೊಲೀಸ್ ದರ್ಪ; ಖಂಡನೆ

Date:

Advertisements

ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿಯ ಸಂದರ್ಭದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ಪೊಲೀಸರು ದರ್ಪ ತೋರಿ, ದೌರ್ಜನ್ಯ ಎಸಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಾಡಹಬ್ಬ ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿ‌ಗಳು, ಅಕ್ಷರಶಃ ಗೂಂಡಾಗಳಂತೆ ವರ್ತಿಸಿ, ವಿಜಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕ ಹೆಚ್ ಕೆ ಚಂದ್ರು ಅವರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯವೆಸಗಿರುವುದನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದೆ.

“ವಿಶ್ವವಿಖ್ಯಾತ ದಸರಾ ಉತ್ಸವದ ಯಶಸ್ವಿಗೆ ಕಳೆದ ಎರಡು ತಿಂಗಳಿನಿಂದ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮದ ಪ್ರತಿನಿಧಿಗಳನ್ನು, ಪೊಲೀಸ್ ಸಿಬ್ಬಂದಿಗಳು ಅಮಾನವೀಯವಾಗಿ ನಡೆಸಿಕೊಂಡಿರುವುದು ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಶೋಭೆ ತರುವ ವಿಷಯವಲ್ಲ. ಇದು ಮಾಧ್ಯಮ ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ. ಈ ಕೃತ್ಯವನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಉಗ್ರವಾಗಿ ಖಂಡಿಸುತ್ತದೆ” ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ ದೀಪಕ್ ಆಕ್ರೋಶ ಹೊರಹಾಕಿದ್ದಾರೆ.

Advertisements
mys1

ಜಂಬೂಸವಾರಿಯ ದಿನ ಅರಮನೆಯ ಆವರಣದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿಗಳನ್ನು ಕೂಡಲೆ ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಬೇಕು. ಒಂದು ವೇಳೆ ಸೂಕ್ತ ಕಾನೂನು ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಮಾಧ್ಯಮದ ಪ್ರತಿನಿಧಿಗಳು ಪ್ರತಿಭಟನೆಯ ಮೂಲಕ ನ್ಯಾಯ ಕಂಡುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಯಚೂರು ವಿವಿ ಕುಲಪತಿ ಮುಖ್ಯ ಅತಿಥಿ!

ಜಿಲ್ಲಾ ಪತ್ರಕರ್ತರ ಸಂಘವು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮೈಸೂರು ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರಿಗೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.

mys
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X