ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಆರ್ಥಿಕ ಕ್ಷೇತ್ರದಲ್ಲಿನ ಕೊಡುಗೆಗಾಗಿ 2024ರ ನೊಬೆಲ್
ಪ್ರಶಸ್ತಿಯನ್ನು ಘೋಷಿಸಿದೆ.
ಟರ್ಕಿಯ ಡೇರಾನ್ ಅಸೆಮೊಗ್ಲು ಹಾಗೂ ಇಂಗ್ಲೆಂಡಿನ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಆರ್ಥಿಕ ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತವೆ ಮತ್ತು ಅವು ಸಮೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬ ಅಧ್ಯಯನಕ್ಕಾಗಿ ವಿಜೇತರಿಗೆ ಗೌರವವನ್ನು ನೀಡಲಾಯಿತು ಎಂದು ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ತಿಳಿಸಿದೆ.
ಕಳೆದ ವರ್ಷದ 2023ರ ಸಾಲಿಗೆ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ‘ಕ್ಲಾಡಿಯಾ ಗೋಲ್ಡಿನ್’ ಅವರನ್ನು
ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಮಹಿಳಾ ಕಾರ್ಮಿಕ ಮಾರುಕಟ್ಟೆಯ ಫಲಿತಾಂಶಗಳ ಬಗ್ಗೆ
ನಮ್ಮ ತಿಳುವಳಿಕೆಯನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಅವರಿಗೆ ಈ ಗೌರವವನ್ನು ನೀಡಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!
ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ನೀಡುವುದನ್ನು 1968ರಲ್ಲಿ ಪ್ರಾರಂಭಿಸಲಾಯಿತು. ಇಲ್ಲಿಯವರೆಗೂ ಒಟ್ಟು ಮೂವರು ಮಹಿಳೆಯರನ್ನು ಒಳಗೊಂಡು 93 ಮಂದಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಭಾರತದ ಅಮರ್ತ್ಯ ಸೇನ್ ಅವರು 1998ರಲ್ಲಿ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.
