ಕುರ್ಚಿ ಅಲುಗಾಡುತ್ತಿರುವಾಗ ಮುಸ್ಲಿಮರನ್ನು ಓಲೈಸಲು ಸಿಎಂ ತಂತ್ರ: ಆರ್‌ ಅಶೋಕ್‌ ಆರೋಪ

Date:

Advertisements

ಮತಬ್ಯಾಂಕ್‌ಗಾಗಿ ಮತ್ತು ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ ಪ್ರಕರಣ ಹಿಂಪಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರದ ವಿರು‌ದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್‌ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕಾಂಗ್ರೆಸ್‌ಗೆ ಮುಸ್ಲಿಮರ ಓಟು ಬೇಕೆಂದು ಹೀಗೆ ಮಾಡಲಾಗಿದೆ” ಎಂದು ದೂರಿದರು.

“ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿದಾಗಲೂ ಇದೇ ರೀತಿ ಮಾಡಿದ್ದಾರೆ. ಇವರ‍್ಯಾರೂ ಸ್ವಾತಂತ್ರ್ಯ ಹೋರಾಟಗಾರರಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ” ಎಂದರು.

Advertisements

“ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂಬ ಸುಳ್ಳು ಹಬ್ಬಿಸುತ್ತಿದ್ದಾರೆ. ಮೆಟ್ರೊ, ಜಲಜೀವನ್‌ ಮಿಷನ್‌, ಉಪನಗರ ರೈಲು ಮೊದಲಾದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅನುದಾನ ನೀಡಿದ್ದಾರೆ. ಅಷ್ಟು ಆರೋಪ ಮಾಡುವುದಾದರೆ ಶ್ವೇತಪತ್ರ ಬಿಡುಗಡೆಗೊಳಿಸಿ ಎಷ್ಟು ಅನುದಾನ ನೀಡಲಾಗಿದೆ ಎಂದು ತಿಳಿಸಲಿ” ಎಂದು ಒತ್ತಾಯಿಸಿದರು.

“224 ಶಾಸಕರಿಗೆ ಎಷ್ಟು ಅನುದಾನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಪಟ್ಟಿ ನೀಡಲಿ. ಪ್ರತಿ ಜಿಲ್ಲೆಗೆ ತೆರಿಗೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಿ. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಹೆಚ್ಚಿದ್ದು, ವಾಹನಗಳ ಸರಾಸರಿ ವೇಗ 17 ಕಿ.ಮೀ. ನಿಂದ 12 ಕಿ.ಮೀ. ಗೆ ಇಳಿದಿದೆ. ರಾಜ್ಯದ ಜನರಿಗೆ ಕಾಂಗ್ರೆಸ್‌ ಎಷ್ಟು ತಾರತಮ್ಯ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

“ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಒಂದು ಕಡೆ ಸಿದ್ದರಾಮಯ್ಯ ಸೈಟು ವಾಪಸ್‌ ಕೊಟ್ಟರೆ, ಮತ್ತೊಂದೆಡೆ ಮಲ್ಲಿಕಾರ್ಜುನ ಖರ್ಗೆ ಸೈಟು ವಾಪಸ್‌ ನೀಡಿದ್ದಾರೆ. ಇನ್ನೊಂದೆಡೆ ಸರ್ಕಾರ ಪ್ರಕರಣ ವಾಪಸ್‌ ಪಡೆದಿದೆ. ಹಿಂದೂಗಳನ್ನು ಟಾರ್ಗೆಟ್‌ ಮಾಡುವ ಜೊತೆಗೆ ಕ್ರಿಮಿನಲ್‌ಗಳ ಪ್ರಕರಣ ವಾಪಸ್‌ ಪಡೆದಿದ್ದಾರೆ. ಕನ್ನಡ ಹೋರಾಟಗಾರ ನಾರಾಯಣಗೌಡರನ್ನು ಜೈಲಿಗೆ ಹಾಕಿದ್ದರು. ಆದರೆ ಭಯೋತ್ಪಾದಕರಿಗೆ ಮಾತ್ರ ಪರೋಕ್ಷವಾಗಿ ಬೆಂಬಲ ನೀಡಲಾಗುತ್ತಿದೆ. ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದವರು ಕಾಂಗ್ರೆಸ್‌ನ ಪದಾಧಿಕಾರಿಗಳಾಗಿದ್ದಾರೆ. ರಾಮೇಶ್ವರಂ ಕೆಫೆಯ ಬಾಂಬ್‌ ಸ್ಪೋಟ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ” ಎಂದು ದೂರಿದರು.

ರಾಜ್ಯಪಾಲರಿಗೆ ಮನವಿ

“ಪ್ರಕರಣ ಹಿಂಪಡೆದ ಕುರಿತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಪತ್ರ ಸಲ್ಲಿಸಲಾಗಿದೆ. ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದ ಬಳಿ ಸ್ಪಷ್ಟನೆ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದ ವಿರುದ್ಧ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X