ಚುನಾವಣೋತ್ತರ ಸಮೀಕ್ಷೆ | ಕಾಂಗ್ರೆಸ್‌ಗೆ ರಾಜ್ಯದ ಅಧಿಕಾರ?!

Date:

Advertisements

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ರಾಜ್ಯಾದ್ಯಂತ ಅಂದಾಜು 65.69% ಮತದಾನವಾಗಿದೆ. ಮತದಾರರು ಯಾರಿಗೆ ಒಲವು ತೋರಿದ್ದಾರೆಂದು ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳು ಬಹಿರಂಗವಾಗಿವೆ. ಅವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ನಾಲ್ಕು ವರ್ಷಗಳ ಹಿಂದೆ ಅಪರೇಷನ್ ಕಮಲದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ, ಮತ್ತೊಮ್ಮೆ ಅಧಿಕಾರ ಹಿಡಿಯಬೇಕೆಂದು ಶ್ರಮಿಸಿತ್ತು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರನ್ನು ಕರೆತಂದು ಪ್ರಚಾರ ನಡೆಸಿತ್ತು. ಕಾಂಗ್ರೆಸ್‌ ಕೂಡ ಶತಾಯಗತಾಯ ಈ ಬಾರಿ ಬಹುಮತದೊಂದಿಗೆ ಸರ್ಕಾರ ರಚಿಸಬೇಕೆಂದು ಸಿದ್ದತೆ ನಡೆಸಿತ್ತು. ಜೆಡಿಎಸ್‌ ಎಂದಿನಂತೆ ಕಿಂಗ್‌ ಮೇಕರ್ ಆಗಬೇಕೆಂದು ಕಸರತ್ತು ನಡೆಸಿತ್ತು.

ಇದೀಗ, ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಪ್ರಕಾರ, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು, 122ರಿಂದ 140 ಸ್ಥಾನಗಳನ್ನು ಪಡೆಯಲಿದೆ. ಇನ್ನು ಆಡಳಿತ ವಿರೋಧಿ ಅಲೆಯಿಂದ ಬಿಜೆಪಿ 62ರಿಂದ 89 ಸೀಟುಗಳನ್ನಷ್ಟೇ ಗಳಿಸಲಿದೆ. ಜೆಡಿಎಸ್ 20ರಿಂದ 25 ಸ್ಥಾನ ಗಳಿಸಿದರೆ, ಇತರೆಯವರು ಸೊನ್ನೆಯಿಂದ 03 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ತಿಳಿಸಿದೆ.

Advertisements

ಟಿವಿ9 ಕನ್ನಡ ಮತ್ತು ಸಿ-ವೋಟರ್ ಒಗ್ಗೂಡಿ ನಡೆಸಿದ ಸಮೀಕ್ಷೆಯ ವರದಿಯೂ ಬಿಡುಗಡೆಯಾಗಿದೆ. ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ಅದರ ಪ್ರಕಾರ, ಒಟ್ಟು 224 ಕ್ಷೇತ್ರಗಳ ಪೈಕಿ, ಕಾಂಗ್ರೆಸ್‌ 100ರಿಂದ 112 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ 83ರಿಂದ 95, ಜೆಡಿಎಸ್ 21-29 ಕ್ಷೇತ್ರಗಳನ್ನು ಹಾಗೂ ಇತರರು 2ರಿಂದ 6 ಸ್ಥಾನಗಳನ್ನು ಗೆಲ್ಲಲಿದ್ದಾರೆ ಎಂದು ಹೇಳಿದೆ.

ಟಿವಿ9 ಭಾರತ್ ವರ್ಷ್ – ಪೋಲ್ ಸ್ಠಾರ್‌ ನಡೆಸಿರುವ ಸಮೀಕ್ಷೆ, ಕಾಂಗ್ರೆಸ್‌ 99-109, ಬಿಜೆಪಿ 88-98, ಜೆಡಿಎಸ್ 21-26 ಹಾಗೂ ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಾರೆ ಎಂದಿದೆ.

ಎಬಿಪಿ ನ್ಯೂಸ್‌ ನಡೆಸಿರುವ ಸಮೀಕ್ಷೆಯೂ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದೆ. ಆದರೆ, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತದೆ ಎಂದು ಸಮೀಕ್ಷೆಯ ಅಂಕಿಅಂಶಗಳು ಹೇಳುತ್ತಿವೆ. ಎಬಿಪಿ ನ್ಯೂಸ್‌ ಪ್ರಕಾರ, ಕಾಂಗ್ರೆಸ್ 81-101, ಬಿಜೆಪಿ 66-86 ಹಾಗೂ ಜೆಡಿಎಸ್ 20-27 ಸ್ಥಾನಗಳನ್ನು ಪಡೆಯಲಿವೆ.

ನ್ಯೂಸ್‌ ನೇಷನ್ ನಡೆಸಿದ ಸಮೀಕ್ಷೆಯು ಬಿಜೆಪಿ ಬಹುಮತ ಪಡೆಯುತ್ತದೆ ಎಂದು ಹೇಳುತ್ತಿದೆ. ಆ ಮೂಲಕ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರುವ ಸಾಧ್ಯತೆಗಳನ್ನು ಸೂಚಿಸುತ್ತಿದೆ. ಬಿಜೆಪಿ 114, ಕಾಂಗ್ರೆಸ್ 86 ಹಾಗೂ ಜೆಡಿಎಸ್ 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ನ್ಯೂಸ್‌ ನೇಷನ್ ಸಮೀಕ್ಷೆ ಹೇಳುತ್ತಿದೆ.

ರಿಪಬ್ಲಿಕ್ ಟಿವಿ ಮತ್ತು ಪಿ ಮಾರ್ಕ್ ಸಮೀಕ್ಷೆಯೂ ಅಂತಂತ್ರವನ್ನು ಸೂಚಿಸುತ್ತಿದೆ. ಅಲ್ಲದೆ, ಕಾಂಗ್ರೆಸ್‌ ಮತ್ತು ಬಿಜೆಪಿ ಸಮಬಲ ಸಾಧಿಸುವ ಸಾಧ್ಯತೆಗಳಿವೆ ಎಂದೂ ಹೇಳುತ್ತಿದೆ. ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 94-108 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 85-100 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ.

ಸುವರ್ಣ ನ್ಯೂಸ್ ಮತ್ತು ಜನ್ ಕಿ ಬಾತ್ ನಡೆಸಿರುವ ಸಮೀಕ್ಷೆಯು ಕಾಂಗ್ರೆಸ್‌-ಬಿಜೆಪಿ ಸಮಬಲ ಪಡೆಯಬಹುದು ಎಂದು ಸೂಚಿಸಿದೆ. ಆದರೂ, ಅದರ ಅಂಕಿಅಂಶಗಳು ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬರಬಹುದು ಎಂದು ಹೇಳುತ್ತಿವೆ. ಕಾಂಗ್ರೆಸ್ 106-91 ಕ್ಷೇತ್ರಗಳಲ್ಲಿ, ಬಿಜೆಪಿ 94-117 ಸ್ಥಾನಗಳನ್ನು ಪಡೆಯಬಹುದು. ಜೆಡಿಎಸ್ 14-24 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕು ಎಂದು ಸಮೀಕ್ಷೆ ಹೇಳಿದೆ.

ಜೀ ನ್ಯೂಸ್ ಮತ್ತು ಮಾಟ್ರಿಜ್‍ ಕೂಡ ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್‌ಗೆ ಬಹುಮತವೆಂದು ಹೇಳುತ್ತಿವೆ. ಕಾಂಗ್ರೆಸ್‌ 103ರಿಂದ 118 ಕ್ಷೇತ್ರಗಳಲ್ಲಿ, ಬಿಜೆಪಿ 79-94 ಸ್ಥಾನಗಳು ಹಾಗೂ ಜೆಡಿಎಸ್ 25-33 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳುತ್ತಿದೆ.

ಕಾಂಗ್ರೆಸ್‌ ಸರಳ ಬಹುಮತ ಪಡೆಯುತ್ತದೆ ಎಂದು ಟೈಮ್ಸ್‌ ನೌ ಸಮೀಕ್ಷೆ ಹೇಳಿದೆ. ಕಾಂಗ್ರೆಸ್‌ 113 ಸ್ಥಾನಗಳನ್ನು, ಬಿಜೆಪಿ 85, ಜೆಡಿಎಸ್ 23 ಹಾಗೂ ಇತರರು 03 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಟೈಮ್ಸ್‌ ನೌ ಪ್ರತಿಪಾದಿಸಿದೆ.

ಟುಡೇಸ್ ಚಾಣಕ್ಯ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 120 ಸ್ಥಾನಗಳನ್ನು ಪಡೆದರೆ, ಬಿಜೆಪಿ 92 ಸ್ಥಾನಗಳನ್ನು ಪಡೆಯಬಹುದು ಎನ್ನಲಾಗಿದೆ. ಹಾಗೆಯೇ ಜೆಡಿಎಸ್ 12 ಸ್ಥಾನಗಳನ್ನು ಗೆದ್ದರೆ, ಇತರರು ಮೂರು ಸ್ಥಾನಗಳನ್ನು ಪಡೆಯುವ ಸಾಧ್ಯತೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X