ಮೈಸೂರು | ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಸಚಿವ ಡಾ ಹೆಚ್ ಸಿ ಮಹದೇವಪ್ಪ

Date:

Advertisements

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನವನ ವಿನ್ಯಾಸಗೊಳಿಸಿದ ವಿಜೇತರಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರಶಸ್ತಿ ವಿತರಿಸಿದರು.

ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಈ ಬಾರಿಯ ದಸರಾ ಸಾಂಸ್ಕೃತಿಕ ಚಳುವಳಿಯಾಗಿ ನಡೆದಿದೆ ಎಂದರು.

1002030939

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿ ದಸರಾ ಆಚರಿಸುವಂತೆ ತಿಳಿಸಿದ್ದರು. ಅದರಂತೆ ಜನರಲ್ಲಿ ಸಹೋದರತೆ, ಸೌಹಾರ್ದತೆ, ಘನತೆಯ ಬದುಕನ್ನು ಬಿತ್ತುವಂತೆ ಈ ಬಾರಿಯ ದಸರಾವನ್ನು ಆಚರಿಸಲಾಗಿದೆ. ಧರ್ಮ, ಜಾತಿಗೂ ಮೀರಿದ ಸಮಾಜವನ್ನು ನಿರ್ಮಿಸುವ ಸಂದೇಶ ಸಾರಲಾಗಿದೆ ಎಂದು ಅಭಿಪ್ರಾಯಿಸಿದರು.

Advertisements

ಈ ಬಾರಿಯ ದಸರಾ ವಿಭಿನ್ನವಾಗಿತ್ತು ಎಂಬ ಉತ್ತಮ ಅಭಿಪ್ರಾಯ ಜನರಿಂದ ಕೇಳಿಬಂದಿದೆ. ದಸರಾ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದ್ದು, ಜನರು ಕೂಡ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರಿಂದ ಜನರ ದಸರಾವಾಗಿ ಪರಿಣಮಿಸಿದೆ. ದಸರಾ ಯಶಸ್ಸಿಗೆ ಮೈಸೂರಿನ ಎಲ್ಲಾ ಜನತೆ ಕಾರಣೀಭೂತರಾಗಿದ್ದಾರೆ. ಈ ಯಶಸ್ವಿ ದಸರಾ ಆಚರಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ಕಿರೀಟ ಇಟ್ಟಂತಾಗಿದೆ ಎಂದು ಹೇಳಿದರು.

1002030943

ತೋಟಗಾರಿಕೆ ಇಲಾಖೆಯಿಂದ ಫಲಪುಷ್ಟ ಪ್ರದರ್ಶನವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ವಿವಿಧ ಪುಷ್ಪಗಳು ಹಾಗೂ ಸಿರಿಧಾನ್ಯಗಳಿಂದ ಬಗೆಬಗೆಯ ಕಲಾ ಪ್ರಕಾರಗಳನ್ನು ರಚಿಸಿ ಜನರ ಮೆಚ್ಚುಗೆ ಗಳಿಸಲಾಗಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಣೆ ಮಾಡಿರುವುದು ಸಂತೋಷದ ವಿಚಾರ ಎಂದರು.

ಗಾಜಿನಮನೆಯಲ್ಲಿ ಸಿದ್ಧಪಡಿಸಿರುವ `ಪ್ರಜಾಪ್ರಭುತ್ವ ನಡೆದು ಬಂದ ದಾರಿ’ ಎಂಬ ಪರಿಕಲ್ಪನೆಯ ವಿನ್ಯಾಸವು ಆರನೇ ಶತಮಾನದಿಂದ ಇಲ್ಲಿಯವರೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹೇಗಿತ್ತು ಎಂಬುದನ್ನು ಹೇಳುತ್ತದೆ. ಬುದ್ಧರ ಕಾಲ, ಅನುಭವ ಮಂಟಪ, ಸ್ವಾತಂತ್ರ್ಯ ಚಳುವಳಿ, ಸಂವಿಧಾನ, ಸಂಸತ್ ಭವನ ಎಲ್ಲವನ್ನು ಸುಂದರವಾಗಿ ವಿನ್ಯಾಸಗೊಳಿಸುವ ಮೂಲಕ ಪ್ರಪಂಚಕ್ಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ವಿವರಿಸಲಾಗಿದೆ ಎಂದು ಪ್ರಶಂಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ್, ಹಿರಿಯ ಸಹಾಯಕ ನಿರ್ದೇಶಕ ಹಬೀಬಾ ನಿಶಾತ್ ಸೇರಿದಂತೆ ಹಲವರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X