ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ, ಸಣ್ಣ ಪ್ರಮಾಣದಲ್ಲಿ ಸಂಚಾರ ದಟ್ಟಣೆ, ಅಣ್ಣಪುಟ್ಟ ಹಾನಿ ಉಂಟಾಗುವ ಸಾಧ್ಯತೆ ಇದೆ. ಮರದ ಕೊಂಬೆಗಳು ಮುರಿಯುವಂತೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಸಹಿತ ಭಾರೀ ಮಳೆಯಾಗುವ ಹಿನ್ನೆಲೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆಗಳನ್ನು ನೀಡಿದ್ದು, “ಮನೆಯೊಳಗೆ ಇರಿ, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿ, ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ, ಮರಗಳ ಕೆಳಗೆ ನಿಲ್ಲಬೇಡಿ ಸುರಕ್ಷಿತ ಆಶ್ರಯ ಪಡೆದುಕೊಳ್ಳಿ, ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ, ವಿದ್ಯುತ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಪ್ಲಗ್ ಆಫ್ ಮಾಡಿ, ಕೂಡಲೇ ಜಲಮೂಲಗಳಿಂದ ಹೊರಬನ್ನಿ, ವಿದ್ಯುತ್ ಉಪಕರಣಗಳಿಂದ ದೂರವಿರಿ, ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ” ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಬಿಸಿಲಿನ ಝಳಕ್ಕೆ ತಂಪೆರೆದ ಮಳೆ