ಮಾಜಿ ಸಚಿವ ಬಾಬಾ ಸಿದ್ದೀಕಿ (66) ಹತ್ಯೆ ಪ್ರಕರಣದ ಹಂತಕರನ್ನು ಗಲ್ಲಿಗೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.
ಮುಂಬೈನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪಂಜಾಬ್‌ನ ಜಲಂಧರ್‌ನ ನಿವಾಸಿ ಮೊಹಮ್ಮದ್ ಜಿಶನ್ ಅಖ್ತರ್ ಪತ್ತೆಗಾಗಿ ಭಾರಿ ಶೋಧ ನಡೆಸಲಾಗಿದೆ. ಈತನ ವಿರುದ್ಧ ಪಂಜಾಬ್ ಮತ್ತು ಹರಿಯಾಣದಲ್ಲಿ ಸುಮಾರು ಒಂಬತ್ತು ಪ್ರಕರಣಗಳು ದಾಖಲಾಗಿದ್ದವು. ಈ ಹತ್ಯೆಯ ಹಿಂದೆ ಆರು ಮಂದಿಯ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜಾತಿ ಗಣತಿ | ಬಿಜೆಪಿ ತನ್ನ ನಿಲುವು ಹೇಳಲಿ: ಡಿ ಕೆ ಶಿವಕುಮಾರ್
ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ಹರಿಯಾಣದ ನಿವಾಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23), ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಮತ್ತು ಪುಣೆಯ ಸಹ ಸಂಚುಕೋರ ಪ್ರವೀಣ್ ಲೋನ್ಕರ್ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬೇಕಾಗಿರುವ ಮೊಹಮ್ಮದ್ ಜಿಶನ್ ಅಖ್ತರ್ ಮತ್ತು ಗೌತಮ್‌ಗಾಗಿ ಹುಡುಕಾಟ ನಡೆಸಿದ್ದಾರೆ.
ಶಂಕಿತ ಶೂಟರ್ ಶಿವಕುಮಾರ್ ಗೌತಮ್‌ಗಾಗಿ ಮುಂಬೈ ಪೊಲೀಸರು ಮಧ್ಯಪ್ರದೇಶದ ಉಜ್ಜಯಿನಿ ಮತ್ತು ಖಾಂಡ್ವಾ ಜಿಲ್ಲೆಗಳ ಪೂಜಾ ಸ್ಥಳಗಳ ಬಳಿ ತೀವ್ರ ಶೋಧ ನಡೆಸಿದ್ದಾರೆ.
