ತುಮಕೂರು | ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ

Date:

Advertisements

ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿ ಮಧ್ಯರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹಾಗೂ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಪ್ರಯಾಸಪಡುವಂತಾಗಿದೆ.

ತುಮಕೂರು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಧ್ಯರಾತ್ರಿಯಿಂದ ಸೋನೆ ಮಳೆ ಹಾಗೂ ಒಮ್ಮೆಮ್ಮೆ ಜೋರು ಮಳೆಯಾಗುತ್ತಿರುವುದರಿಂದ ಜನತೆ ಹೊರಗೆ ತೆರಳಲು ಸಾಧ್ಯವಾಗದೆ ಹೈರಾಣಾಗಿದ್ದಾರೆ.ಈಗಾಗಲೇ ಮಹಾಲಯ ಅಮಾವಾಸ್ಯೆಯಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭೂಮಿ ತಂಪಾಗಿದ್ದು, ಕೊಂಚ ಮಳೆಯಾದರೂ ಸಹ ನೀರು ಹರಿಯುತ್ತಿದೆ. ಹೊಲಗಳು, ತೋಟಗಳಲ್ಲಿ ನೀರು ನಿಂತು ಜಲಾವೃತಗೊಳ್ಳುತ್ತಿವೆ. ಪರಿಸ್ಥಿತಿ ಹೀಗಿರುವಾಗ ಇನ್ನು 5 ದಿನ ನಿರಂತರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿರಂತರ ಮಳೆಯಾದರೆ ರಾಗಿ ಬೆಳೆ ಹಾಗೂ ತೋಟಗಳು ನೀರು ತುಂಬಿಕೊಂಡು ಬೆಳೆ ಹಾಳಾಗುವ ಆತಂಕ ರೈತರನ್ನು ಕಾಡುತ್ತಿದೆ.

1000545395

ಇಂದು ಮುಂಜಾನೆ ಟ್ಯೂಷನ್‌ಗೆ ತೆರಳುವ ವಿದ್ಯಾರ್ಥಿಗಳು, ಬೆಳಗಿನ ಪಾಳಿ ಕೆಲಸಕ್ಕೆ ತೆರಳುವ ಕಾರ್ಖಾನೆ ನೌಕರರು ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯಿಂದ ಹೊರ ಬರಲಾಗದೆ ಛತ್ರಿ, ಜರ್ಕಿನ್‌ಗಳ ಮೊರೆ ಹೋಗಿದ್ದು ಕಂಡು ಬಂತು. ಬೆಳಿಗ್ಗೆ 8 ಗಂಟೆಯ ನಂತರ ಮಳೆ ಬಿಡುವು ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವರುಣ ಮತ್ತಷ್ಟು ಆರ್ಭಟಿಸುತ್ತಿರುವುದು ಎಲ್ಲ ಕೆಲಸ ಕಾರ್ಯಗಳಿಗೆ ಅಡ್ಡಿಯುಂಟಾಗಿದೆ.

Advertisements
1000545381

ಕೆಲವರು ಕೆಲಸಗಳಿಗೆ ಹೋಗಲಾಗದೆ ರಜೆ ಹಾಕಿ ಮನೆಯಲ್ಲಿದ್ದರೆ, ಇನ್ನು ಕೆಲವರು ದ್ವಿಚಕ್ರ ವಾಹನಗಳನ್ನು ಬಿಟ್ಟು ಆಟೋ ರಿಕ್ಷಾಗಳನ್ನು ಆಶ್ರಯಿಸಿ ಕೆಲಸಗಳಿಗೆ ತೆರಳುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.ಮಧ್ಯರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಡಾಂಬರು ಕಾಣದ ರಸ್ತೆಗಳು, ನಗರ ಪ್ರದೇಶಗಳಲ್ಲಿನ ಕೆಲ ಬಡಾವಣೆಗಳ ರಸ್ತೆಗಳು ಕೆಸರುಗದ್ದೆಯಾಗಿ ಮಾರ್ಪಟ್ಟಿವೆ. ಇದರಿಂದ ಜಿಟಿ ಜಿಟಿ ಮಳೆ ಕಿಚಿಪಿಚಿ ಕೆಸರು ಎನ್ನುವಂತಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ರೈತರ ಕೃಷಿ ಕೆಲಸಗಳಿಗೂ ತೊಡಕಾಗಿದ್ದು, ಸದ್ಯ ಮಳೆ ಬಿಡುವು ಕೊಟ್ಟರೆ ಸಾಕು ಎನ್ನುತ್ತಿದ್ದಾರೆ ಜನರು.

1000545400

ನಗರರ ಪ್ರದೇಶಲ್ಲಿ ವಿದ್ಯಾರ್ಥಿಗಳು, ನೌಕರರು ಹಾಗೂ ಇತರೆ ಕೂಲಿ ಕಾರ್ಮಿಕರು ದ್ವಿಚಕ್ರ ವಾಹನಗಳಲ್ಲಿ ಹೋಗಲು ಸಾಧ್ಯವಾಗದೆ ಆಟೋ ರಿಕ್ಷಾಗಳಿಗೆ ಮುಗಿ ಬೀಳುತ್ತಿದ್ದು, ಇದರಿಂದ ಆಟೋಗಳಿಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ತುಮಕೂರು ಅಮಾನಿಕೆರೆ, ಸಿರಾ ಕೆರೆ, ಕುಣಿಗಲ್ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಮಳೆ ಹೀಗೆ ಮುಂದುವರೆದರೆ ಮತ್ತಷ್ಟು ಕೆರೆಗಳು ಭರ್ತಿಯಾಗಿ ಕೋಡಿ ಬೀಳುವ ಸಾಧ್ಯತೆ ಇದೆ.

1000545393

ಮಧುಗಿರಿ-ಕೊರಟಗೆರೆ ತಾಲ್ಲೂಕಿನಲ್ಲಿರುವ ಜಯಮಂಗಲಿ ನದಿ ತುಂಬಿ ಹರಿಯುತ್ತಿದ್ದು, ಈಗಾಗಲೇ ನದಿ ಪಾತ್ರದಲ್ಲಿ ಎಚ್ಚರಿಕೆಯಿಂದ ಓಡಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು, ಫುಟ್‌ಪಾತ್‌ಗಳು ತೊಯ್ದಿದ್ದು, ಜಡಿ ಮಳೆಯಾಗುತ್ತಿರುವುದರಿಂದ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕಾಗಿದೆ. ಜಿಟಿ ಜಿಟಿ ಮಳೆ ಸುರಿಯುತ್ತಿರುವುದರಿಂದ ಹಳ್ಳಿಗಳಲ್ಲಿ ಹಸು, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸಲು ರೈತರು ಪರದಾಡುವಂತಾಗಿದ್ದು, ಜಾನುವಾರುಗಳಿಗೆ ಮೇವು ಒದಗಿಸಲು ತುಂಬಾ ಕಷ್ಟಪಡುವಂತಾಗಿದೆ.

1000545398

ಮೋಡ ಕವಿದ ವಾತಾವರಣ ಮುಂದುವರೆದಿದೆ. ಇನ್ನು 5 ದಿನಗಳ ಕಾಲ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲೆಯಲ್ಲಿ ವರುಣ ಆರ್ಭಟಿಸುತ್ತಿರುವುದರಿಂದ ಈಗಾಗಲೇ ಜಿಲ್ಲಾಡಳಿತ ಆರೆಂಜ್, ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X