ಶಿರಾ ತಾಲ್ಲೂಕಿಗೆ ಕೇಂದ್ರ ಪರಿಶೀಲನಾ ತಂಡ ಭೇಟಿ

Date:

Advertisements

ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (ಓಐಒ) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ ನಡೆಸಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿತು.

ದಯಾಕರ್ ರೆಡ್ಡಿ ಮತ್ತು ತಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ 5 ಕಾಮಗಾರಿಗಳನ್ನು ಪರಿಶೀಲನೆ ನಡೆಸಿತು. ತದನಂತರ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ 5 ಫಲಾನುಭವಿಗಳನ್ನು ಭೇಟಿ ಮಾಡಿ ನರೇಗಾ ಸೌಲಭ್ಯಗಳನ್ನು ಪಡೆದಿರುವ, ಯೋಜನೆಯ ಸದುಪಯೋಗದ ಬಗ್ಗೆ ಮಾಹಿತಿ ಕಲೆ ಹಾಕಿತು.

1000545632

ಸಂಜೀವಿನಿ ಒಕ್ಕೂಟದ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಂಘದ ಕಾರ್ಯಕ್ರಮಗಳ ಸದ್ಬಳಕೆ ಕುರಿತು ಮಾಹಿತಿ ಪಡೆಯಿತು. ನಂತರ ಸ್ವಸಹಾಯ ಸಂಘಗಳ ಲಾಭದಾಯಕ ಚಟುವಟಿಕೆಗಳ ಬಗ್ಗೆ ಫಲಾನುಭವಿಗಳಿಗೆ ಮಾರ್ಗದರ್ಶನ ನೀಡಿತು.

Advertisements
1000545633

ಪಿಎಂಎವೈ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ ವಸತಿ ಯೋಜನೆಯ 5 ಫಲಾನುಭವಿಗಳನ್ನು ಭೇಟಿ ಮಾಡಿ ವಸತಿಗಳನ್ನು ಅನುಷ್ಟಾನ ಮಾಡಿಕೊಂಡಿರುವ ಬಗ್ಗೆ ಖಚಿತ ಪಡಿಸಿಕೊಂಡಿತು. ಇದೇ ವೇಳೆ ಫಲಾನುಭವಿಗಳೊಂದಿಗೆ ಚರ್ಚಿಸಿ ಯೋಜನೆಯಿಂದ ಪಡೆದುಕೊಂಡಿರುವ ಅನುಕೂಲತೆಯ ಬಗ್ಗೆ ಮಾಹಿತಿ ಪಡೆಯಿತು. ರಾಷ್ಟ್ರೀಯ ಪಿಂಚಣಿ ಯೋಜನೆಯ 5 ಫಲಾನುಭವಿಗಳೊಂದಿಗೆ ಚರ್ಚಿಸಿ ಸಮರ್ಪಕವಾಗಿ ಪಿಂಚಣಿ ಬರುವ ಬಗ್ಗೆ ಮಾಹಿತಿ ಪಡೆಯಿತು.

1000545635

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಸ್. ಮಹೇಶ, ಆರ್.ಪ್ರಭಾವತಿ, ವಸತಿ ಯೋಜನೆಯ ತಾಲ್ಲೂಕು ನೋಡಲ್ ಅಧಿಕಾರಿಗಳಾದ ಕುಮಾರ್ ನಾಯಕ್, ನಾರಾಯಣ್, ಸಂಜೀವಿನಿ ಒಕ್ಕೂಟದ ತಾಲ್ಲೂಕು ಸಂಯೋಜಕರಾದ ಮಂಜುನಾಥ್, ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿ ಸೇರಿದಂತೆ ಗ್ರಾ.ಪಂ.ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X