ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ ಎಂಇಎಸ್ ಮುಖಂಡರ ಜೊತೆ ಸುದಿರ್ಘವಾಗಿ ಚರ್ಚೆ ನಡೆಸಿದರು.
“ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸಂದರ್ಭದಲ್ಲಿ ಇಲ್ಲಿಯ ಜನತೆ ಈದ್ ಮಿಲಾದ್ ಮೆರವಣಿಗೆಯನ್ನು ಮುಂದೂಡಿ ಸೌಹಾರ್ದತೆ ಕಾಪಾಡಿದ್ದಾರೆ. ಅದೇ ರೀತಿ ನೀವೂ ಕೂಡಾ ಭಾಷಾ ಸೌಹಾರ್ದತೆಯನ್ನು ಕಾಪಾಡಿ. ಕರ್ನಾಟಕ ರಾಜ್ಯೋತ್ಸವ ರಾಜ್ಯದ ಪ್ರಮುಖ ಮತ್ತು ಹೆಮ್ಮೆಯ ದಿನವಾಗಿದೆ. ಆದ್ದರಿಂದ ನವೆಂಬರ್ 01ರಂದು ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ. ಶಾಂತಿ ಸೌಹಾರ್ದತೆ ಕಾಪಾಡುವುದು ಜಿಲ್ಲಾಡಳಿತದ ಕರ್ತವ್ಯವಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿಯ ಅನನ್ಯತೆ ಮೇಲೆ ಬೆಳಕು ಚೆಲ್ಲಬೇಕು: ಡಾ. ಸಣ್ಣರಾಮ
ಎಂಇಎಸ್ ಕಾರ್ಯಕರ್ತರು, ನಮಗೆ ನವೆಂಬರ್ 1ರಂದು ಕರಾಳ ದಿನಾಚರಣೆಗೆ ಅವಕಾಶ ನೀಡಬೇಕೆಂದು ತಕಾರಾರು ಮಾಡಿದಾಗ ಜಿಲ್ಲಾಧಿಕಾರಿಗಳು ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ಇರುವುದಿಲ್ಲವೆಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮಹಾಪೌರ ಮಾಲೋಜಿರಾವ್ ಅಷ್ಟೇಕರ, ಪ್ರಕಾಶ ಮರಗಾಳೆ, ವಿಕಾಸ ಕಲಘಟಗಿ ಸೇರಿದಂತೆ ಇತರರು ಇದ್ದರು.