ತುಮಕೂರು | ವೈಭವಯುತ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

Date:

Advertisements

ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ತುಮಕೂರು ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೆರವಣಿಗೆ ನಡೆಸುವ, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ದ ಚಿತ್ರ ಪಾಲ್ಗೊಳ್ಳುವಿಕೆ, ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.

1000545782

ರಾಜ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟ, ಕನ್ನಡ ಕವಿ, ಸಾಹಿತಿಗಳ ಭಾವಚಿತ್ರ, ಬ್ಯಾನರ್‌ಗಳ ಅಳವಡಿಕೆಗೆ ಅನುಮತಿ ನೀಡಬೇಕು. ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಮಾತ್ರ ಸನ್ಮಾನಿಸಬೇಕು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

Advertisements

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಎಸ್. ಸಿದ್ಧಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಕನ್ನಡ ಸಂಘಟನೆಗಳ ವಿವಿಧ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X