ಹುಬ್ಬಳ್ಳಿ ಭಾಷಣದಲ್ಲಿ ‘ಸಾರ್ವಭೌಮತ್ವ’ ಪದವನ್ನು ಸೋನಿಯಾ ಗಾಂಧಿ ಬಳಸಿಲ್ಲ; ಕಾಂಗ್ರೆಸ್‌ ಸ್ಪಷ್ಟನೆ

Date:

Advertisements

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ ‘ಸಾರ್ವಭೌಮತ್ವ’ ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ ಟ್ವೀಟ್ಅನ್ನು ಅಳಿಸಿದೆ.

“ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಅಖಂಡತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದ್ದಾಗಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿತ್ತು. ಸಾರ್ವಭೌಮತೆ ಕುರಿತು ಮಾತನಾಡಿರುವ ಸೋನಿಯಾ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು.

ಸೋನಿಯಾ ಗಾಂಧಿ ಅವರ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗವು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು. ನೋಟಿಸ್‌ ಉತ್ತರಿಸಿರುವ ಕಾಂಗ್ರೆಸ್, ‘ಸೋನಿಯಾ ಗಾಂಧಿ ಅವರು ಸಾರ್ವಭೌಮತ್ವ ಪದ ಬಳಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

Advertisements

“ಮೇ 6ರಂದು ಹುಬ್ಬಳ್ಳಿಯಲ್ಲಿ ಭಾಷಣ ಮಾಡಿದ್ದ ಸೋನಿಯಾ ಗಾಂಧಿ ‘ಸಾರ್ವಭೌಮತ್ವ’ ಎಂಬ ಪದವನ್ನು ಎಂದಿಗೂ ಬಳಸಿಲ್ಲ. ಅವರ ಭಾಷಣವನ್ನು ತಪ್ಪಾಗಿ ವರದಿ ಮಾಡಲಾಗಿದ್ದರಿಂದ, ಅದನ್ನು ಅಳಿಸಲಾಗಿದೆ” ಕಾಂಗ್ರೆಸ್ ಬುಧವಾರ ಟ್ವೀಟ್ ಮಾಡಿದೆ. ಟ್ವೀಟ್‌ನಲ್ಲಿ ಸೋನಿಯಾ ಗಾಂಧಿ ಅವರ ಹಿಂದಿ ಭಾಷಣದ ಪ್ರತಿ ಮತ್ತು ಯೂಟ್ಯೂಬ್‌ ವಿಡಿಯೋ ಲಿಂಕ್‌ಅನ್ನು ಹಂಚಿಕೊಂಡಿದೆ.

ಸೋನಿಯಾ ಗಾಂಧಿ ಮತ್ತು ಅವರ ಪಕ್ಷದ ಮಾನ್ಯತೆಯ ವಿರುದ್ಧ ಎಫ್‌ಐಆರ್‌ಗೆ ಕೋರಿ ಚುನಾವಣಾ ಆಯೋಗಕ್ಕೆ ಸೋಮವಾರ ಬಿಜೆಪಿಯ ಟೀಕೆಗೆ ಸಂಬಂಧಿಸಿದಂತೆ ಗಲಾಟೆ ಸ್ಫೋಟಗೊಂಡಿದೆ. ಪಕ್ಷದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಸ್ಪಷ್ಟಪಡಿಸಲು ಮತ್ತು ಸರಿಪಡಿಸಲು ಚುನಾವಣಾ ಸಮಿತಿಯು ಕಾಂಗ್ರೆಸ್‌ಗೆ ಕೇಳಿದೆ.

ಈ ಸುದ್ದಿ ಓದಿದ್ದೀರಾ?: ಈಗೇನಿದ್ದರೂ `ಆಪರೇಷನ್’ದೇ ಮಾತುಕತೆ!

ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ, “ಭಾರತದ ಒಕ್ಕೂಟದಲ್ಲಿ ಕರ್ನಾಟಕವು ಅತ್ಯಂತ ಪ್ರಮುಖ ಸದಸ್ಯ ರಾಜ್ಯವಾಗಿದೆ. ಭಾರತದ ಒಕ್ಕೂಟದ ಸದಸ್ಯ ರಾಜ್ಯದ ಸಾರ್ವಭೌಮತ್ವವನ್ನು ರಕ್ಷಿಸುವ ಯಾವುದೇ ಕರೆಯು ಪ್ರತ್ಯೇಕತೆಯ ಕರೆಗೆ ಸಮಾನವಾಗಿರುತ್ತದೆ. ಇದು ಅಪಾಯಕಾರಿ ಮತ್ತು ವಿನಾಶಕಾರಿಯಾಗಿದೆ. ಪ್ರಸ್ತುತ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಇಂತಹ ಮಾತುಗಳನ್ನು ಆಡಬಾರದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X