ಧಾರವಾಡ ಹುಬ್ಬಳ್ಳಿ ಬೈಪಾಸ್ ನಲ್ಲಿ ದ್ವಿಚಕ್ರ ವಾಹನಕ್ಕೆ ದೊಡ್ಡ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರ ದೇಹಗಳು ಚಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವು ಸಂಭವಿಸಿರುವ ಮನಕಲುಕುವ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಧಾರವಾಡ | ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ ನಗರದ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಹನುಮಂತ ದೇವಾಲಯದ ಹತ್ತಿರ ಈ ಅಪಘಾತ ಸಂಭವಿಸಿದ್ದು, ಛಿದ್ರಗೊಂಡ ದೇಹಗಳ ಪರಿಶೀಲನೆಗೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.