ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಕೊಪ್ಪಳ | ಜಾತಿ ನಿಂದನೆಗೈದು ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
ಆಟೋ ಹುಬ್ಬಳ್ಳಿಯಿಂದ ರಾಣೆಬೆನ್ನೂರು ಕಡೆಗೆ ತೆರಳುತ್ತಿತ್ತು. ಕಾರು ದಾವಣಗೆರೆ ಕಡೆಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟವರ ವಿವರ ಲಭ್ಯವಾಗಿಲ್ಲ.
ಸ್ಥಳಕ್ಕೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.