ವಿಜಯಪುರ | ಒಂದೇ ವರ್ಷದಲ್ಲಿ ಸತತ 3ನೇ ಬಾರಿಗೆ ಅಮಾನತಾದ ಡಿಡಿಪಿಐ

Date:

Advertisements

ಕರ್ತವ್ಯಲೋಪ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಎನ್‌.ಎಚ್ ನಾಗೂರು ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಅಮಾನತಾಗುವ ಮೂಲಕ ಹ್ಯಾಟ್ರಿಕ್ ಸಾಧನೆಯ ಕುಖ್ಯಾತಿ ಪಡೆದಿದ್ದಾರೆ.

2024-25ರ ಶೈಕ್ಷಣಿಕ ಸಾಲಿನಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆದ ಹೊಸ ಶಾಲೆಗಳ ನೋಂದಣಿಯಲ್ಲಿ ನಿಯಮಬಾಹಿರವಾಗಿ ಅನುಮೋದನೆ ನೀಡಿದ್ದಾ ಎಂಬ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಗೂರು ವರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಆದೇಶಿಸಿದ್ದಾರೆ.

EDSS ಯೋಜನೆಗಳ ಅನುಷ್ಠಾನದಲ್ಲಿ ಕರ್ತವ್ಯಲೋಕ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ಎನ್‌.ಎಚ್‌ ನಾಗೂರು ಹಾಗೂ ಇಬ್ಬರು ಉಪನ್ಯಾಸಕರನ್ನು 2024ರ ಜನವರಿ 30 ರಂದು ಮೊದಲ ಬಾರಿಗೆ ಅಮಾನತು ಮಾಡಲಾಗಿತ್ತು.

Advertisements

ಅದಾದ ಬಳಿಕ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯದಲ್ಲಿ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗಿಲ್ಲ. ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡದೆ ಪರೀಕ್ಷಾ ಕೇಂದ್ರಕ್ಕೆ ಕಳಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಜನ ಸಮೂಹವನ್ನು ನಿಯಂತ್ರಿಸುವಲ್ಲಿಯೂ ವಿಫಲರಾಗಿದ್ದಾರೆ ಎಂಬ ಆರೋಪದಲ್ಲಿ 2024 ಎಪ್ರಿಲ್​ 16ರಂದು ಎರಡನೇ ಬಾರಿಗೆ ಅಮಾನತು ಮಾಡಲಾಗಿತ್ತು.

ಇದೀಗ ಮೂರನೇ ಬಾರಿಗೆ, ಹೊಸ ಶಾಲೆಗಳ ನೋಂದಣಿಯಲ್ಲಿ ವಿಚಾರದಲ್ಲಿ ನಿಮಯಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಮಾನತಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X