ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, “ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ ಐಟಿ ಕಾರಿಡಾರ್‌ನಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ” ಎಂದು ದೂರಿದ್ದಾರೆ.
“ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳು ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.
“ಹೂಡಿಕೆದಾರ ಸ್ವರ್ಗವಾಗಿದ್ದ ಬೆಂಗಳೂರು, ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್
ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ : ಜೆಡಿಎಸ್
ಹೆಚ್ ಡಿ ದೇವೇಗೌಡ ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ್ಯಾಂಡ್ ಬೆಂಗಳೂರು. ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ. ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂದು ಎಂದು ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ.
ಕೇಂದ್ರ ಸರಕಾರದ ಅಸಹಕಾರ ಮತ್ತು ಈ ಹಿಂದೆ 5 ವರ್ಷ ಆಳಿದ ಬಿಜೆಪಿ ಸರಕಾರ ದ ಅವಾOತರಗಳೇ ಇದಕ್ಕೆ ಕಾರಣ ಕುಮಾರ ಸ್ವಾಮಿ ಯವರೇ.