ಕೆನಡಾದಲ್ಲಿ ನಿಜ್ಜರ್ ಹತ್ಯೆಗೆ ಅಮಿತ್ ಶಾ ಅನುಮತಿ: ‘ವಾಷಿಂಗ್ಟನ್ ಪೋಸ್ಟ್ʼ ವರದಿ

Date:

Advertisements

ಕೆನಡಾದಲ್ಲಿ ನಡೆದಿದ್ದ ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ನಿಗೂಢ ಹತ್ಯೆ ಪ್ರಕರಣದಲ್ಲಿ ಈಗ ಅನುಮಾನದ ಕಣ್ಣು ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡೆ ತಿರುಗಿದೆ. ಕೆನಡಾ ಅಧಿಕಾರಿಗಳ ಆರೋಪಗಳನ್ನು ಉಲ್ಲೇಖಿಸಿ ಮಾಡಿರುವ ವಿಶೇಷ ವರದಿಯಲ್ಲಿ ʼವಾಷಿಂಗ್ಟನ್ ಪೋಸ್ಟ್ʼ ಈ ಪ್ರಕರಣದಲ್ಲಿ ಅಮಿತ್ ಶಾ ಕೈವಾಡ ಇದೆ ಎಂದು ಹೇಳಿದೆ.

ಅಮಿತ್ ಶಾ ಮತ್ತು ಭಾರತದ ವಿದೇಶಿ ಗುಪ್ತಚರ ಸಂಸ್ಥೆ ‘ರಾ’ ದ ಹಿರಿಯ ಅಧಿಕಾರಿಗಳು ನಿಜ್ಜರ್ ಹತ್ಯೆಗೆ ಅನುಮತಿ ನೀಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ಕೆನಡಾದ ಉನ್ನತ ಭದ್ರತಾ ಮತ್ತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಡುವೆ ಅಕ್ಟೋಬರ್ 12 ರಂದು ಸಿಂಗಾಪುರದಲ್ಲಿ ನಡೆದ ರಹಸ್ಯ ಸಭೆಯ ವೇಳೆ ಈ ಮಾಹಿತಿಯನ್ನು ಹಂಚಿಕೊಂಡಿರುವುದಾಗಿ ವರದಿಯಾಗಿದೆ.

Advertisements

ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡದ ಕುರಿತು ಕೆನಡಾ ಅಧಿಕಾರಿಗಳು ಹಸ್ತಾಂತರ ಮಾಡಿರುವ ದಾಖಲೆಗಳನ್ನು ಉಲ್ಲೇಖಿಸಿ ವರದಿ ಮಾಡಿರುವ ʼವಾಷಿಂಗ್ಟನ್ ಪೋಸ್ಟ್ʼ, ಭಾರತ ಬಿಷ್ಣೋಯ್ ಗ್ಯಾಂಗ್ ಅನ್ನು ಬಳಸಿ ಕಾರ್ಯಾಚರಣೆ ನಡೆಸಿದ ಕುರಿತ ಮಾಹಿತಿ ಇದೆ ಎಂದು ವರದಿಯಲ್ಲಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ಈ ಬಗ್ಗೆ ತನಗೆ ಸಿಕ್ಕಿರುವ ಮಾಹಿತಿಯ ಬಗ್ಗೆ ವಿವರವಾಗಿ ತನಿಖೆ ಮಾಡಲು ಭಾರತೀಯ ರಾಜತಾಂತ್ರಿಕರನ್ನು ವಿಚಾರಣೆಗೆ ಒಳಪಡಿಸಲು ಕೆನಡಾ ಬಯಸಿರಬಹುದು. ಆದರೆ ಆ ರಾಜತಾಂತ್ರಿಕರಿಗಿದ್ದ ವಿನಾಯಿತಿಯನ್ನು ರದ್ದು ಪಡಿಸಲು ಭಾರತ ಸರಕಾರ ಒಪ್ಪದೇ ಇದ್ದಿದ್ದಕ್ಕೆ ಭಾರತೀಯ ಹೈಕಮಿಷನರ್ ಸಹಿತ ಆರು ಮಂದಿ ರಾಜತಾಂತ್ರಿಕರನ್ನು ಕೆನಡಾ ದೇಶ ಬಿಡುವಂತೆ ಹೇಳಿದೆ ಎಂದು ವರದಿಯಾಗಿದೆ.

ʼವಾಷಿಂಗ್ಟನ್ ಪೋಸ್ಟ್ʼ ವರದಿ ಮತ್ತು ಅಮಿತ್ ಶಾ ಭಾಗಿಯಾಗಿರುವುದರ ಕುರಿತ ಕೆನಡಾ ಅಧಿಕಾರಿಗಳ ಆರೋಪಕ್ಕೆ ವಿದೇಶಾಂಗ ವ್ಯವಹಾರ ಅಥವಾ ಗೃಹ ವ್ಯವಹಾರಗಳ ಸಚಿವಾಲಯಗಳು ಪ್ರತಿಕ್ರಿಯಿಸಿಲ್ಲ ಎಂದು ವರದಿ ಹೇಳಿದೆ.

ಆದರೆ, ನಿವೃತ್ತ ಭಾರತೀಯ ರಾಜತಾಂತ್ರಿಕರನ್ನು ಮಾತನಾಡಿಸಿರುವುದಾಗಿ ಹೇಳಿರುವ ‘ದಿ ವೈರ್’ ಸುದ್ದಿತಾಣ , ಕ್ಯಾಬಿನೆಟ್ ಮಂತ್ರಿಯೊಬ್ಬರು ಇಂಥ ಕಾರ್ಯಾಚರಣೆಯಲ್ಲಿ ಅದೂ ಸಾಗರದಾಚೆಗಿನ ವ್ಯವಹಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಯ ಬಗ್ಗೆ ಆ ನಿವೃತ್ತ ಅಧಿಕಾರಿ ಅಚ್ಚರಿ ವ್ಯಕ್ತಪಡಿಸಿರುವುದಾಗಿ ಹೇಳಿದೆ.

ಕೆನಡಾದ ಅಧಿಕಾರಿಗಳು ಅರೋಪಿಸಿರುವಂಥ ಯಾವುದೇ ರೀತಿಯಲ್ಲಿ ಶಾ ತೊಡಗಿಸಿಕೊಂಡಿಲ್ಲ ಎಂದು ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ತಿಳಿಸಿರುವುದಾಗಿಯೂ ‘ದಿ ವೈರ್’ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ನ ಈ ಹಿಂದಿನ ವರದಿಯಲ್ಲಿ ಅಮಿತ್ ಶಾ ಹೆಸರು ಇರಲಿಲ್ಲ. ಭಾರತದ ಹಿರಿಯ ಸಚಿವರು ಮತ್ತು ‘ರಾ’ ದ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಮಾತ್ರ ಹೇಳಲಾಗಿತ್ತು. ಆದರೆ ನಂತರ ಪರಿಷ್ಕರಿಸಿದ ವರದಿಯಲ್ಲಿ ಪತ್ರಿಕೆ ತನ್ನ ಮೂಲಗಳಿಂದ ಲಭ್ಯವಾದ ಹೆಚ್ಚು ವಿವರವಾದ ಇನ್ಪುಟ್ ಆಧಾರದ ಮೇಲೆ ಅಮಿತ್ ಶಾ ಹೆಸರನ್ನು ನೇರವಾಗಿ ಉಲ್ಲೇಖಿಸಿದೆ.

ಶಾ ವಿರುದ್ಧ ಇಂಥ ಕೃತ್ಯದ ಆರೋಪ ಬರುತ್ತಿರುವುದು ಇದೇ ಮೊದಲೇನೂ ಆಲ್ಲ. ದಶಕದ ಹಿಂದೆ ಗುಜರಾತ್ ನ ಗೃಹ ಸಚಿವರಾಗಿದ್ದಾಗ ಸೊಹ್ರಾಬುದ್ದೀನ್, ಅವರ ಪತ್ನಿ ಕೌಸರ್ ಬಿ ಮತ್ತು ಸಹಚರ ತುಳಸಿರಾಮ್ ಪ್ರಜಾಪತಿಯನ್ನು ನಕಲಿ ಪೊಲೀಸ್ ಎನ್‌ಕೌಂಟರ್‌ಗಳ ಮೂಲಕ ಕೊಲ್ಲುವ ಸಂಚಿನಲ್ಲಿ ಭಾಗಿಯಾಗಿದ್ದಾಗಿ ಸಿಬಿಐ ಆರೋಪಿಸಿತ್ತು. ಆದರೆ ಮೋದಿ ಪ್ರಧಾನಿಯಾದ ಕೂಡಲೇ ಶಾ ಅವರನ್ನು ವಿಚಾರಣಾ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆ ಮಾಡಲಾಯಿತು ಮತ್ತು ಸಿಬಿಐ ಮೇಲ್ಮನವಿ ಸಲ್ಲಿಸಲು ಮುಂದಾಗಿರಲಿಲ್ಲ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

11 COMMENTS

  1. Washington post, Newyork times and BBC are working on beliefs and not by evidences. Their’s beliefs are always anti Indid.Pro deep American state jaurnals.

  2. ಇದು ನಿಜ ಆಗಿದ್ರೆ ಒಳ್ಳೆ ಕೆಲಸ. ಅಮೆರಿಕ ಮಾಡೋದು ಅದೇ ಕೆಲಸ , ತನ್ನ ದೇಶ ದ್ರೋಹಿಗಳನ್ನು ಸದೆ ಬಡಿಯುವುದು.

    ತನ್ನ ಸ್ವಂತ ದೇಶದ ಬಗ್ಗೆನೇ ವಿಷ ಕಾರೋ ದೇಶದ್ರೋಹಿಗಳು ಎಲ್ಲರಿಗೂ ಇದೇ ಸರಿಯಾದ ಶಿಕ್ಷೆ, ಕೆಲವು ಪತ್ರಿಕೆಗಳು ಸೇರಿ

  3. ಕೆನಡಾ ಪ್ರಧಾನಿ trudo ನಮ್ಮಲ್ಲಿ ಯಾವುದೇ ಮಾಹಿತಿ ಇಲ್ಲವೆಂದು ಹೇಳಿರುವಾಗ ಇವೆಲ್ಲ ವರದಿಗಳನ್ನು ಯಾರು ನಂಬಬೇಕು

    • All,
      Just block this rouge Eedina , these sold out Stooges always try to defame Indian govt and India. These paid domestic meida houses are much more dangerous than foreign powers.

  4. All,
    Just block this rouge Eedina , these sold out Stooges always try to defame Indian govt and India. These paid domestic meida houses are much more dangerous than foreign powers.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X