ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬರೋಬ್ಬರಿ 371 ಕೋಟಿ ರೂ. ಭಾರೀ ಹಗರಣದಲ್ಲಿ ಆರೋಪಿಯಾಗಿದ್ದ ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್ ಚಿಟ್ ನೀಡಿದೆ. ಪ್ರಕರಣದಿಂದ ನಾಯ್ಡು ಅವರನ್ನು ಖುಲಾಸೆ ಗೊಳಿಸಿದೆ.
2014 ಮತ್ತು 2019ರ ನಡುವೆ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ. ಚಂದ್ರಬಾಬು ನಾಯ್ಡು ಅವರು ರಾಜ್ಯ ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ ಎಂದು ಆರೋಪಿಸಲಾಗಿತ್ತು. ಹಗರಣದ ತನಿಖೆಯನ್ನು ಹಿಂದಿನ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರವು ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿದ್ದ ಸಿಐಡಿ, 2023ರ ಸೆಪ್ಟೆಂಬರ್ 9ರಂದು ನಾಯ್ಡು ಅವರನ್ನು ಬಂಧಿಸಿತ್ತು. 50 ದಿನಗಳ ಕಾಲ ಜೈಲಿನಲ್ಲಿದ್ದ ನಾಯ್ಡು, ಕಳೆದ ವರ್ಷ ಅಕ್ಟೋಬರ್ 31ರಂದು ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು.
ಈ ನಡುವೆ, ಹಗರಣದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಕೂಡ ತನಿಖೆ ನಡೆಸಿದೆ. ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಎರಡು ಖಾಸಗಿ ಸಂಸ್ಥೆಗಳಾದ ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ (ಇಂಡಿಯಾ) ಮತ್ತು ಡಿಸೈನ್‌ಟೆಕ್ ಸಿಸ್ಟಮ್ ಕಂಪನಿಗಳ ಮೇಲೆ ಸೋಮವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 23.54 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.
ಆರೋಪಿತ ಎರಡು ಖಾಸಗಿ ಸಂಸ್ಥೆಗಳು ಮತ್ತು ಅವುಗಳ ಕಾರ್ಯನಿರ್ವಾಹಕರಿಗೆ ಸಂಬಂಧಿಸಿದ 151 ಕೋಟಿ ರೂ.ಗಳ ಹಣದ ಜಾಡು ಪತ್ತೆ ಮಾಡಲಾಗಿದೆ. ಆದರೂ, ಆ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರ ಪಾತ್ರವನ್ನು ದೃಢೀಕರಿಸುವ ಯಾವುದೇ ಪುರಾವೆಗಳು ತನಿಖೆ ವೇಳೆ ಕಂಡುಬಂದಿಲ್ಲ ಎಂದು ಇ.ಡಿ ಹೇಳಿದೆ. ನಾಯ್ಡು ಅವರಿಗೆ ಹಗರಣದಲ್ಲಿ ಕ್ಲೀನ್ ಚಿಟ್ ನೀಡಿದೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಬೆಂಬಲಿಸಿದರೆ bail ! smile !! 😂
ವಿರೋಧಿಸಿದರೆ ಜೈಲು !? 😳