ತುಮಕೂರು | ಕುರಿಪಾಳ್ಯದಲ್ಲಿ ಮನೆಕುಸಿತ : ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಡಿಸಿ ಸೂಚನೆ

Date:

Advertisements

ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ ಹಳೆಯ ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಕುರಿಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಬೇಕು. ಜಿಲ್ಲೆಯಾದ್ಯಂತ ಜಿಟಿ-ಜಿಟಿ ಮಳೆಯಾಗುತ್ತಿರುವುದರಿಂದ ಬೀಳುವ ಹಂತದ ಮನೆಗಳಲ್ಲಿರುವವರನ್ನೂ ಸಹ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ತಿಳಿಸಿದರಲ್ಲದೆ, ಹಾನಿಗೊಳಗಾಗಿರುವ ಮನೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಜೀವ ಹೋದರೆ ಮರಳಿ ಬರೋದಿಲ್ಲ. ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯಬೇಕೆಂದು ಮನೆ ಕಳೆದುಕೊಂಡು ನಿರಾಶ್ರಿತರಾದವರಲ್ಲಿ ಮನವಿ ಮಾಡಿದರು.

1000548860

ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ನಿರಾಶ್ರಿತರಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಹಾಸಿಗೆ, ಹೊದಿಕೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisements

ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕುರಿಪಾಳ್ಯ ಪ್ರದೇಶದಲ್ಲಿ ಬಹುಪಾಲು ಪೌರ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದು, ಇವರ ಮನೆಗಳ ಪಕ್ಕದಲ್ಲಿಯೇ ರೈಲು ಮಾರ್ಗ ಹಾದು ಹೋಗಿರುವುದರಿಂದ ಹಕ್ಕುಪತ್ರ ನೀಡಲು ಅವಕಾಶವಿರುವುದಿಲ್ಲವೆಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

1000548959

ಸುಮಾರು 50 ವರ್ಷಗಳಿಂದ ಇದೇ ಪ್ರದೇಶದಲ್ಲಿ ವಾಸವಿರುವ ಈ ಪೌರ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳ ಸಮೀಕ್ಷೆಯನ್ನು ತಹಶೀಲ್ದಾರ್ ಕಚೇರಿ ಹಾಗೂ ಮಹಾನಗರಪಾಲಿಕೆ ವತಿಯಿಂದ ಜಂಟಿಯಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

1000548860 1

ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಗಂಜಿ ಕೇಂದ್ರದಲ್ಲಿ ಸುಮಾರು 30 ಮಂದಿ ನಿರಾಶ್ರಿತರಿಗೆ ತಂಗಲು ಸ್ಥಳದಲ್ಲಿಯೇ ಆಹಾರ, ನೀರು, ಹಾಸಿಗೆ-ಹೊದಿಕೆಗಳ ವ್ಯವಸ್ಥೆ ಮಾಡಿದರು.

ಅದೇ ರೀತಿ ನಗರದ ಹೊರವಲಯದ ಗಂಗಸAದ್ರ ಪ್ರದೇಶದಲ್ಲಿಯೂ ಗುಡಿಸಲುಗಳಿಗೆ ಮಳೆ ನೀರು ನುಗ್ಗಿರುವುದರಿಂದ ಗಂಗಸಂದ್ರ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆದು ಸುಮಾರು 12 ಮಂದಿಗೆ ಆಶ್ರಯ ನೀಡಲಾಗಿದೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ವರಿ, ಪಾಲಿಕೆ ಇಂಜಿನಿಯರ್ ವಿನಯ್, ಸ್ಥಳೀಯರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X