ಕಾವೇರಿ-5ನೇ ಹಂತ‌ | ಯೋಜನೆ ನಮ್ಮದು, ಕ್ರೆಡಿಟ್ ಕಾಂಗ್ರೆಸ್‌ನದ್ದು: ಆರ್‌ ಅಶೋಕ್

Date:

Advertisements
  • ‘ಬಿಜೆಪಿ ಅವಧಿಯಲ್ಲಿ 2019 ಜನವರಿ 1ರಂದು ಯೋಜನೆಯ ಕಾಮಗಾರಿ ಆರಂಭ’
  • ‘110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಸಿದ್ದು ನನ್ನ ಅವಧಿಯಲ್ಲಿ

ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿ ಕೆ ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “2018 ಜನವರಿ 24ರಂದು ಈ ಯೋಜನೆಗೆ 5,500 ಕೋಟಿ ರೂ. ಸಾಲ ಪಡೆಯಲು ಅಂದಿನ ಬಿಜೆಪಿ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆಗ ಕಾಮಗಾರಿಗೆ 90 ತಿಂಗಳ ಗಡುವು ವಿಧಿಸಲಾಗಿತ್ತು. 2019 ಜನವರಿ 1ರಂದು ಯೋಜನೆಯ ಕಾಮಗಾರಿ ಆರಂಭವಾಗಿತ್ತು. ಆಗಲೂ ಬಿಜೆಪಿ ಸರ್ಕಾರವೇ ಇತ್ತು” ಎಂದರು.

“ಪ್ಯಾಕೇಜ್‌ 2ನಲ್ಲಿ ನಿತ್ಯ 77.5 ಕೋಟಿ ಲೀಟರ್‌ ನೀರು ಶುದ್ಧೀಕರಣ ಘಟಕ, ಪ್ಯಾಕೇಜ್‌ 3 ರಲ್ಲಿ ಟಿ.ಕೆ.ಹಳ್ಳಿ ಪಂಪಿಂಗ್‌ ಘಟಕ, ಪ್ಯಾಕೇಜ್‌ 4ರಲ್ಲಿ ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿ ಎರಡು ಪಂಪಿಂಗ್‌ ಸ್ಟೇಶನ್‌, ಪ್ಯಾಕೇಜ್‌ 7ರಲ್ಲಿ ಟಿ.ಕೆ.ಹಳ್ಳಿ-ಹಾರೋಹಳ್ಳಿ ಪೈಪ್‌ಲೈನ್‌, ಪ್ಯಾಕೇಜ್‌ 8ರಲ್ಲಿ ಹಾರೋಹಳ್ಳಿ-ವಾಜರಹಳ್ಳಿ ಪೈಪ್‌ಲೈನ್‌, ಪ್ಯಾಕೇಜ್‌ 10 ರಲ್ಲಿ ಪಶ್ಚಿಮ ಭಾಗದಲ್ಲಿ ಪೈಪ್‌ಲೈನ್‌, ಪ್ಯಾಕೇಜ್‌ 12 ರಲ್ಲಿ ಪೂರ್ವ ಭಾಗದಲ್ಲಿ ನೆಲಮಟ್ಟದ ಜಲಾಗಾರ, ಪ್ಯಾಕೇಜ್‌ 13 ರಲ್ಲಿ ಪಶ್ಚಿಮ ಭಾಗದಲ್ಲಿ ನೆಲಮಟ್ಟದ ಜಲಾಗಾರ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು” ಎಂದು ವಿವರಿಸಿದರು.

Advertisements

“ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿತ್ತು. ಡಿಪಿಆರ್‌, ಹಣ ಹೊಂದಿಕೆ, ಕಾಮಗಾರಿ ಆರಂಭ, ಹೀಗೆ ಎಲ್ಲವನ್ನೂ ಮುಚ್ಚಿಟ್ಟು ಹೆಸರು ತೆಗೆದುಕೊಳ್ಳುತ್ತಿದ್ದಾರೆ. ದೇವರನ್ನು ಕೂರಿಸಿ ಹೋಮವನ್ನು ನಾವು ಮಾಡಿದರೆ, ಮಂಗಳಾರತಿ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಬಂದು ಇದು ನಮ್ಮದು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ 110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಸಿದ್ದೆ. ಈಗ ಏಕಾಏಕಿ ನಾವೇ ಕಷ್ಟಪಟ್ಟಿದ್ದು ಎನ್ನುವಂತೆ ಹೇಳಿಕೊಳ್ಳುತ್ತಿದ್ದಾರೆ” ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಹಣ ವಾಪಸ್‌

“ಬಿಜೆಪಿ ಸರ್ಕಾರ ಬೆಂಗಳೂರಿನಲ್ಲಿ ರಸ್ತೆ ಅಭಿವೃದ್ಧಿಗೆ 8,000 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರಲ್ಲಿ ಸುಮಾರು 50% ಕೆಲಸ ಆರಂಭವಾಗಿತ್ತು. ರಾಜಕಾಲುವೆ ಸುಧಾರಣೆಗೆ 1,600 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಡಿ.ಕೆ.ಶಿವಕುಮಾರ್‌ ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆಂದು ಹೇಳಿ ಇದೇ ಹಿಂದಿನ ಅನುದಾನಗಳನ್ನು ವಾಪಸ್‌ ಪಡೆದುಕೊಂಡರು. ಬಳಿಕ ಹೊಸದಾಗಿ ನಯಾ ಪೈಸೆ ಬಿಡುಗಡೆ ಮಾಡಿಲ್ಲ” ಎಂದು ಕಿಡಿಕಾರಿದರು.

ಮಳೆ ಹಾನಿ, ಬ್ಯಾಂಡ್‌ ಬೆಂಗಳೂರು

“ಬೆಂಗಳೂರಿನ ಬೆಳ್ಳಂದೂರು, ಮಹದೇವಪುರ ಮೊದಲಾದ ಕಡೆ ಮಳೆಯಿಂದ ಹಾನಿಯಾಗಿದೆ. ಇಂತಹ ಸಮಯದಲ್ಲೂ ಬ್ರ್ಯಾಂಡ್‌ ಬೆಂಗಳೂರು ಎನ್ನುತ್ತಿದ್ದಾರೆ. ಆದರೆ ಕೇವಲ ಸದ್ದು ಕೇಳಿಬರುತ್ತಿದ್ದು, ಬ್ರ್ಯಾಂಡ್‌ ಬದಲು ಬ್ಯಾಂಡ್‌ ಬೆಂಗಳೂರು ಆಗಿದೆ. ನಿಯಂತ್ರಣ ಕೊಠಡಿ ತೆರೆದಿದ್ದಾರೆಯೇ ಹೊರತು ಯಾವ ಕೆಲಸವೂ ಆಗಿಲ್ಲ. ಗುತ್ತಿಗೆದಾರರಿಗೆ ಬಿಲ್‌ ಬಾಕಿ ಇದೆ. ಒಂದೋ ಬ್ರ್ಯಾಂಡ್‌ ಬೆಂಗಳೂರು ಘೋಷಣೆಯನ್ನು ವಾಪಸ್‌ ಪಡೆಯಲಿ, ಇಲ್ಲವಾದರೆ ಏನು ಮಾಡುತ್ತೇವೆಂದು ಸರಿಯಾದ ಮಾಹಿತಿ ನೀಡಲಿ” ಎಂದು ಆಗ್ರಹಿಸಿದರು.

“ಮುಡಾ ಅಧ್ಯಕ್ಷ ಈಗ ರಾಜೀನಾಮೆ ನೀಡಿದ್ದಾರೆ. ಏನೂ ಅಕ್ರಮ ನಡೆದಿಲ್ಲವೆಂದಾದರೆ ಈಗ ರಾಜೀನಾಮೆ ನೀಡಿದ್ದು ಏಕೆ ಎಂದು ಕಾಂಗ್ರೆಸ್‌ ಸ್ಪಷ್ಟನೆ ನೀಡಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ದಾಖಲೆ ನೀಡಿದೆ. ಇಲ್ಲಿ ನಾಗೇಂದ್ರ ಅಮಾಯಕನಾಗಿದ್ದರೆ ಅವರು ರಾಜೀನಾಮೆ ನೀಡಿದ್ದೇಕೆ, ಸಿದ್ದರಾಮಯ್ಯ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X