ಕೊಡಗು | ಗ್ರೇಟರ್ ರಾಜಾಸೀಟ್ ಅಕ್ರಮ; ಲೋಕಾಯುಕ್ತ ತನಿಖಾಧಿಕಾರಿಯಿಂದ ವಿಚಾರಣೆ

Date:

Advertisements

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖಾಧಿಕಾರಿ ತೇಜಶ್ರೀ ಬಿ ಮದ್ದೋಡಿಯವರು ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು.

ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ ನಡೆದಿದ್ದು, ನಕಲಿ ಎಂ ಬಿ ಪುಸ್ತಕ ಸೃಷ್ಠಿಸಿ ಅಪರಾಧ ಎಸಗಿದ್ದಾರೆಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಎಂಜಿನಿಯರ್ ಕೆ ಎಲ್ ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇದರ ಅನ್ವಯ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ತನಿಖಾಧಿಕಾರಿ ತೇಜಶ್ರೀ ಬಿ ಮದ್ದೋಡಿ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಆರೋಪಿತ ಕಿರಿಯ ಎಂಜಿನಿಯರ್ ಎಂ ಬಿ‌ ಪುಸ್ತಕ ಅಸಲಿಯೆಂದು ವಾದಿಸಿದರೂ ಕೂಡ ಕೊನೆಗೆ ತನಿಖಾಧಿಕಾರಿ ಎಲ್ಲ ಮಗ್ಗುಲುಗಳಲ್ಲಿ ಪರಿಶೀಲಿಸಿ ನಕಲಿ ಎನ್ನಲು ಒಟ್ಟು ಐದು ಆಧಾರಗಳನ್ನು ಗುರುತಿಸಿ ದಾಖಲು ಮಾಡಿಕೊಂಡರು. ಕಾರ್ಯಪಾಲಕ ಅಭಿಯಂತರ ಸಿದ್ದೇಗೌಡ ಅವರು ಕಾಮಗಾರಿಗಳ ವಿವರಣೆ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ವರದಿ ಮಾಡಿ ಸಲ್ಲಿಸಿದ್ದ ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿ ತೇಜಶ್ರೀಯವರಿಗೆ ನೀಡಿದರು.

Advertisements

ತೇಜಶ್ರೀಯವರು, ದೂರುದಾರ ತೆನ್ನಿರಾ ಮೈನಾ ಮತ್ತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಗ್ರೇಟರ್ ರಾಜಾಸೀಟ್ ಬಳಿ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

2023ರ ಮಾರ್ಚ್ 18ರಂದು ಲೋಕಾರ್ಪಣೆಯಾದ ಗ್ರೇಟರ್ ರಾಜಾಸೀಟ್ ಇನ್ನೂ ತೋಟಗಾರಿಕೆ ಇಲಾಖೆಗೆ ಹಸ್ತಾಂತರವಾಗದರುವ ಬಗ್ಗೆ ಲೋಕೋಪಯೋಗಿ ಎಂಜಿನಿಯರ್‌ಗಳಿಂದ ವಿವರಣೆ ಪಡೆದರು. ಉತ್ತರ ನೀಡಲು ತಡಬಡಿಸಿದ ಎಂಜಿನಿಯರ್‌ಗೆ ತರಾಟೆಗೆ ತೆಗೆದುಕೊಂಡಿದ್ದು, ಅಲ್ಲಲ್ಲಿ ಬಿರುಕು ಬಿಟ್ಟ ಕಾಮಗಾರಿಗಳು, ಹಾರಿಹೋದ ಹೆಂಚುಗಳು, ಕರೆಂಟ್ ಸಂಪರ್ಕವಿಲ್ಲದ ಲೈಟುಗಳು, ಒಡೆದು ಹೋದ ಗ್ರಾನೆಟ್ ಕಲ್ಲುಗಳು, ಅಕ್ಕಪಕ್ಕ ಸರಿದಿದ್ದ ಇಂಟರ್ ಲಾಕ್, ದೂರದೂರ ಇರುವ ಗಿಡಗಳು ಸೇರಿದಂತೆ ಎಲ್ಲವನ್ನೂ ತಮ್ಮ ಸಿಬ್ಬಂದಿಯಿಂದ ಚಿತ್ರೀಕರಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶೇ.50ರಷ್ಟು ಪೇಮೆಂಟ್ ಕೋಟಾ ರದ್ದುಗೊಳಿಸಿ, ಯುಬಿಡಿಟಿ ಉಳಿಸಿ: ಎಐಡಿಎಸ್ಒ ಆಗ್ರಹ

ನಿರ್ವಹಣಾಧಿಕಾರಿ ಎಇಇ ಮತ್ತು ಇಇ ಮಡಿಕೇರಿಗೆ ಬಂದು ತನಿಖೆಗೆ ಹಾಜರಾಗಲು ಸೂಚನೆಯನ್ನು ನೀಡಿದ್ದಾರೆ.

“ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತೆನ್ನಿರಾ ಮೈನಾ, “ಈಗಾಗಲೇ ಕಿರಿಯ ಎಂಜಿನಿಯರ್ ಕೆ ಎಲ್ ದೇವರಾಜ್ ನಕಲಿ ಎಂ ಬಿ ಪುಸ್ತಕ ರಚಿಸಿ ಅಪರಾಧ ಎಸಗಿರುವುದು ಕಂಡುಬಂದಿದ್ದು, ಮುಂದೆ ಅಕ್ರಮದ ವಿವರಗಳು ಬಹಿರಂಗವಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಡಿಕೇರಿ ನಗರ ಸಭೆಯ ಅಧ್ಯಕ್ಷ ಹೆಚ್ ಎಂ ನಂದಕುಮಾರ್ ಸೇರಿದಂತೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X