ತುರುವೇಕೆರೆ | ತುಮುಲ್ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹ

Date:

Advertisements

ತುಮಕೂರು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಅವರು ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಮುಂದಾಗಿರುವ ಸಿ.ವಿ.ಮಹಲಿಂಗಪ್ಪ ಮತ್ತು ಅವರ ಪತ್ನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ತುರುವೇಕೆರೆ ಶಾಸಕ ಎಂ. ಟಿ. ಕೃಷ್ಣಪ್ಪ ಆಗ್ರಹಿಸಿದರು.

ತುರುವೇಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟಕ್ಕೆ ಮುಂಬರುವ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿ ಸಿ.ವಿ.ಮಹಲಿಂಗಯ್ಯನವರು ಹಾಲು ಉತ್ಪಾದಕರೇ ಅಲ್ಲದಿದ್ದರೂ ಸಹ ಎನ್.ಮಾವಿನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ಪಡೆದು ವಂಚಿಸಿದ್ದಾರೆ. ಅಲ್ಲದೇ ಅವರ ಪತ್ನಿ ಸವಿತಾರವರನ್ನು ಮುಗಳೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಪಡೆದಿರುವುದು ಅಕ್ರಮವಾಗಿದೆ. ಅಲ್ಲದೇ ಅವರುಗಳು ತಾವು ಪಡೆದಿರುವ ಸಂಘಗಳಿಂದ ಮತ ಚಲಾಯಿಸುವ ಹಕ್ಕನ್ನೂ ಸಹ ಪಡೆದುಕೊಂಡಿರುವುದು ಅಕ್ರಮವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು.

ಸಿ.ವಿ.ಮಹಲಿಂಗಯ್ಯನವರು ವಾಸ್ತವವಾಗಿ ತುರುವೇಕೆರೆಯಲ್ಲಿರುವ ತಮ್ಮ ಸ್ವಂತ ಮನೆಯಲ್ಲಿ ವಾಸವಿದ್ದಾರೆ. ತುರುವೇಕೆರೆ ಪಟ್ಟಣ ಪಂಚಾಯಿತಿಯೂ ಸಹ ಮಹಲಿಂಗಯ್ಯನವರ ವಾಸ ಸ್ಥಳವನ್ನು ಧೃಢೀಕರಿಸಿದೆ. ಆದರೆ ಮಹಲಿಂಗಯ್ಯನವರು ತಮ್ಮ ಹಾಗೂ ತಮ್ಮ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ ಸುಳ್ಳು ವಾಸ ಸ್ಥಳದ ದಾಖಲೆ ಸೃಷ್ಠಿಸಿ ವಂಚಿಸಿದ್ದಾರೆ. ಅಕ್ರಮವಾಗಿ ದಂಪತಿಗಳಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ನೀಡಿರುವ ಎನ್.ಮಾವಿನಹಳ್ಳಿ ಮತ್ತು ಮುಗಳೂರು ಹಾಲು ಉತ್ಪಾದಕರ ಸಹಕಾರ ಸಂಘವನ್ನು ಕೂಡಲೇ ಸೂಪರ್ ಸೀಡ್ ಮಾಡಬೇಕು ಎಂದು ಒತ್ತಾಯಿಸಿದರು. ಸದಸ್ಯತ್ವ ಪಡೆಯಲು ಸುಳ್ಳು ದಾಖಲೆ ಸೃಷ್ಠಿಸಿರುವ ಸಿ.ವಿ.ಮಹಲಿಂಗಯ್ಯ ಮತ್ತು ಅವರ ಪತ್ನಿ ಸವಿತಾ ಅವರು ಚುನಾವಣಾ ಪ್ರಕ್ರಿಯೆಲ್ಲಿ ತೊಡೆಲು ಅವಕಾಶ ನೀಡಿದರೆ ತಾವು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

Advertisements

ಈ ಹಿಂದೆ ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಸಿ.ವಿ.ಮಹಲಿಂಗಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಸಿಬ್ಬಂದಿಯ ನೇಮಕಾತಿ ಮಾಡಿಕೊಳ್ಳಲು ಅಕ್ರಮ ದಾರಿ ಹಿಡಿದಿದ್ದರು. ತಮ್ಮ ಅಧಿಕಾರಾವಧಿ ಇನ್ನು ಮೂರು ತಿಂಗಳು ಇರುವ ಸಂಧರ್ಭದಲ್ಲಿ ಸುಮಾರು 219 ಹುದ್ದೆಗಳನ್ನು ತುಂಬುವ ಪ್ರಯತ್ನ ಮಾಡಿದ್ದರು. ನೇರ ನೇಮಕಾತಿ ಮಾಡುವುದರಿಂದಾಗಿ ಪ್ರತಿಯೊಂದು ಹುದ್ದೆಗೂ ಇಂತಿಷ್ಟು ಭಕ್ಷೀಸು ನೀಡಬೇಕೆಂದು ಮಾಡಿದ್ದ ಪ್ರಯತ್ನವನ್ನು ಪರೀಕ್ಷಾರ್ಥಿಗಳು ಬಹಿರಂಗಪಡಿಸಿ ನ್ಯಾಯಾಲಯದಿಂದ ತಡಯಾಜ್ಞೆ ತಂದಿದ್ದರು. ಪ್ರತಿಯೊಂದು ಹುದ್ದೆಗೂ ಕನಿಷ್ಠ 20 ರಿಂದ 50 ಲಕ್ಷದ ವರೆಗೂ ವ್ಯವಹಾರ ನಡೆದಿತ್ತು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ತಮಗೆ ಬೇಕಾದವರಿಂದ ಖಾಲಿ ಉತ್ತರ ಪತ್ರಿಕೆಯನ್ನು ಪಡೆದು ರಾಯಚೂರು ವಿಶ್ವವಿದ್ಯಾಲಯದಲ್ಲಿ ಮೌಲ್ಯ ಮಾಪನ ಮಾಡಿಸುವ ನಾಟಕ ಮಾಡಿ ಹಣ ಪಡೆದವರಿಗೆ ಹುದ್ದೆ ನೀಡುವ ದೊಡ್ಡ ಹಗರಣ ನಡೆದಿತ್ತು. ನ್ಯಾಯಾಲಯದ ಮಧ್ಯ ಪ್ರವೇಶದಿಂದಾಗಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಯಿತು ಎಂದು ಕೃಷ್ಣಪ್ಪ ಹೇಳಿದರು.

ಹಿಂದಿನ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯನವರ ವಿರುದ್ಧ ಗುರುತರವಾದ ಹಲವಾರು ದೂರುಗಳು ಇರುವುದರಿಂದ ಅಲ್ಲದೇ ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ನಿಲ್ಲಲು ಮುಂದಾದರೆ ಹೋರಾಟ ಖಚಿತ. ಯಾವುದೇ ಕಾರಣಕ್ಕೂ ಸಹಕಾರ ಸಂಘಗಳ ಅಧಿಕಾರಿಗಳು ಈ ಕುರಿತು ದಾಖಲಾತಿ ಪರಿಶೀಲಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ನೀಡಕೂಡದೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದರು. ತುಮುಲ್ ನ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯನವರು ಖಾಲಿ ಹುದ್ದೆ ನೇಮಕ ಪ್ರಕ್ರಿಯೆಯಲ್ಲಿ ಹಣದಾಸೆಗೆ ಸಾಕಷ್ಟು ಅವ್ಯವಹಾರ ಮಾಡಿದ್ದು ಬಡ ರೈತರ ಮಕ್ಕಳಿಗೆ ಅನ್ಯಾಯವೆಸಗಿದರು ಎಂದು ಕೃಷ್ಣಪ್ಪ ಆರೋಪಿಸಿದರು.

ಸಿ.ವಿ.ಮಹಲಿಂಗಯ್ಯನವರ ಅಕ್ರಮದ ಕುರಿತು ಈಗಾಗಲೇ ಹಲವಾರು ಮಂದಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಅಲ್ಲಿ ತನಿಖೆ ನಡೆಯುತ್ತಿದೆ. ಲೋಕಾಯುಕ್ತ ಅಧಿಕಾರಿಗಳು ಕೂಡಲೇ ತನಿಖೆಯನ್ನು ಚುರುಕುಗೊಳಿಸಿ ಸಿ.ವಿ.ಮಹಲಿಂಗಯ್ಯನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೃಷ್ಣಪ್ಪ ಒತ್ತಾಯಿಸಿದರು. ಸಿ.ವಿ.ಮಹಲಿಂಗಯ್ಯನವರು ಅಧ್ಯಕ್ಷರಾಗಿದ್ದ 5 ವರ್ಷಗಳ ಕಾಲ ಸಾಕಷ್ಟು ಅವ್ಯವಹಾರಗಳನ್ನು ನಡೆಸಿದ್ದಾರೆ. ಕಲಬೆರಕೆ ಹಾಲು ಶೇಖರಣೆ ಆಗಲೂ ಸಹ ಮಹಲಿಂಗಯ್ಯ ಪರೋಕ್ಷವಾಗಿ ಕಾರಣೀಭೂತರಾಗಿದ್ದಾರೆ. ಇವರ ಅವಧಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರವಾಗಿದ್ದು ಸರ್ಕಾರ ಸೂಕ್ತ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೀಶ್, ಮುಖಂಡರುಗಳಾದ ಬಡಗರಹಳ್ಳಿ ತ್ಯಾಗರಾಜು, ಹೆಡಿಗೇಹಳ್ಳಿ ವಿಶ್ವನಾಥ್, ಮುನಿಯೂರು ರಂಗಸ್ವಾಮಿ, ಬೂವನಹಳ್ಳಿ ಪುನಿತ್, ಮಹೇಶ್ ಇದ್ದರು.

ವರದಿ – ಎಸ್. ನಾಗಭೂಷಣ್ ತುರುವೇಕೆರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X