ಮೇ 14ರವರೆಗೆ ಮಂಗಳೂರು ಕಮಿಷನರೇಟ್‌ನ ಐದು ಠಾಣೆ ವ್ಯಾಪ್ತಿ ನಿಷೇಧಾಜ್ಞೆ ಜಾರಿ

Date:

Advertisements
  • ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
  • ಕಲ್ಲು ತೂರಾಟದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಲೆಗೆ ಗಾಯ

ಮಂಗಳೂರು ಕಮಿಷನರೇಟ್‌ ಅಡಿಯಲ್ಲಿರುವ ಮಂಗಳೂರು ಗ್ರಾಮಾಂತರ, ಕಾವೂರು, ಸುರತ್ಕಲ್, ಮೂಡುಬಿದಿರೆ ಹಾಗೂ ಬಜಪೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೇ 14ರ ಬೆಳಗ್ಗೆ 6 ಗಂಟೆವರೆಗೆ ಐಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತ ನಡುವೆ ಬುಧವಾರ ರಾತ್ರಿ ಘರ್ಷಣೆ ಸಂಭವಿಸಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗುವ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ ಈ ಐದು ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹೈಕಮಾಂಡ್ ನನ್ನ ಸಿಎಂ ಮಾಡಿದ್ರೆ ಬೇಡ ಅನ್ನೋಕೆ ಆಗುತ್ತಾ?: ಡಾ. ಜಿ ಪರಮೇಶ್ವರ್‌

ಬುಧವಾರ ಸಂಜೆ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರು ಮೂಡುಶೆಟ್ಟೆಯಲ್ಲಿ ಕಾರಿನಲ್ಲಿ ತೆರಳುತಿದ್ದಾಗ ಗಲಾಟೆ ನಡೆದಿತ್ತು. ಈ ವೇಳೆ ಕಲ್ಲೆಸೆತದಿಂದಾಗಿ ಮೂವರು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಒಬ್ಬ ಪೊಲೀಸ್‌ ಸಿಬ್ಬಂದಿಗೆ ಗಾಯವಾಗಿತ್ತು. ಎರಡೂ ಕಡೆಯಿಂದ ಸಾಕಷ್ಟು ಜನ ಸೇರಿದ್ದರಿಂದ ಉದ್ರಿಕ್ತ ವಾತಾವರಣ ಉಂಟಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X