ಕಾರೊಂದು ಹಳಕ್ಕೆ ಉರಳಿದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಶಿವಂಪೇಟ ಬಳಿ ನಡೆದಿದೆ.
ಅಪಘಾತದಲ್ಲಿ ಧನವಂತ ಶಿವರಾಮ (55), ಧನವಂತ ದುರಗಮ್ಮ(45), ಅನೀತಾ (30), ಬಿಂದು (14), ಶ್ರಾವಣಿ (12), ಶಾಂತಿ (45) ಹಾಗೂ ಮಮತಾ (16) ಮೃತರು ಎಂದು ಗುರುತಿಸಲಾಗಿದೆ.
ಶಿವಂಪೇಟ ಬಳಿಯ ಭೀಮಲಾ ತಾಂಡಾದ ಎಲರೂ ಸಂಬಂಧಿಕರೊಬ್ಬರ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಹಿನ್ನಲೆ ಈ ದುರ್ಘಟನೆ ಜರುಗಿದೆ.
ಸ್ಥಳೀಯ ನಿವಾಸಿಗಳು, ಪೊಲೀಸರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಕುರಿತಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಘಾತ ವ್ಯಕ್ತಪಡಿಸಿದ್ದು, ಒಂದೇ ಕುಟುಂಬದ 7 ಜನ ಸಾವನ್ನಪ್ಪಿದ್ದು ನಿಜಕ್ಕೂ ದುಃಖಕರ ಸಂಗತಿ. ಗಾಯಾಳುವಿಗೆ ಉತ್ತಮ ವ್ಯೆದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ರೇವಂತ್ ರೆಡ್ಡಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ
ಈ ಕುರಿತು ಶಿವಂಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.