ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಧಾರವಾಡದಲ್ಲಿ ನಡೆದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿ, ಸದಾಶಿವ ಆಯೋಗ ವರದಿ ಕೂಡಲೇ ಜಾರಿಗೊಳಿಸುವಂತೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
ದೇಶಾದ್ಯಂತ ದಲಿತಪರ ಸಂಘಟನೆಗಳು 30 ವರ್ಷಗಳಿಂದ ನಡೆಸುತ್ತಿರುವ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಕೂಡ ಒಳಮೀಸಲಾತಿ ಆದೇಶ ಎತ್ತಿಹಿಡಿದು ಆಯಾ ರಾಜ್ಯಗಳಿಗೆ ಜಾರಿಗೆ ಅಧಿಕಾರ ನೀಡಿದೆ.
ಇದನ್ನು ಓದಿದ್ದೀರಾ? ಧಾರವಾಡ | ಹೊಲಿಗೆ ಮತ್ತು ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
ಆ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ರಾಜ್ಯಸರ್ಕಾರ ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.