ಧಾರವಾಡ ಜಿಲ್ಲೆಯಲ್ಲಿ ಹಾಡಹಗಲೆ ನಡೆಯುತ್ತಿರುವ ಜೂಜು ದಂಧೆಯಂತಹ ಕಾನೂನು ಬಾಹಿರ ಚಟುವಟಿಕೆಗಳ ಹತ್ತಿಕ್ಕಲು, ಅಪರಾಧ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಾರ್ಯಾಚರಣೆ ನಡೆದಿದ್ದು ಈಗಾಗಲೇ ಜೂಜು ಆಡುತ್ತಿದ್ದ ಒಟ್ಟು 13 ಜನರನ್ನು ಬಂಧಿಸಿದ್ದಾರೆ.
ಧಾರವಾಡ ತಾಲೂಕಿನ ದುಮ್ಮವಾಡ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಒಟ್ಟು 5 ಜನ ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಹಚ್ಚಿ ಅಂದರ-ಬಾಹರ ಜೂಜಾಟವನ್ನು ಆಡುತ್ತಿದ್ದಾಗ ಪೋಲಿಸರು 40370/- ರೂ ಮತ್ತು 52 ಇಸ್ಪೀಟ್ ಎಲೆಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.
ಹಾಗೆಯೇ ಅಕ್ಟೋಬರ್ 15ರಂದು ಹುಬ್ಬಳ್ಳಿ ಧಾರವಾಡ ಬೈಪಾಸ್ ನ ಹತ್ತಿರದ ಇಟಗಟ್ಟಿ ಗ್ರಾಮದ ಹತ್ತಿರ ರಸ್ತೆಯ ಬದಿಗೆ ಸಾರ್ವಜನಿಕ ಸ್ಥಳದಲ್ಲಿ ಒಟ್ಟು 8 ಜನ ಆರೋಪಿತರನ್ನು 7250/- ರೂ ಮತ್ತು 52 ಇಸ್ಪೀಟ್ ಎಲೆಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ಜಿಲ್ಲೆಯಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಧಾರವಾಡ ಜಿಲ್ಲಾ ಪೊಲೀಸ್ ಸದಾ ಸನ್ನದ್ದವಾಗಿದ್ದು, ಅಪರಾಧ ನಿಯಂತ್ರಣಕ್ಕಾಗಿ ಜಿಲ್ಲೆಯ ಪೋಲೀಸ್ ಕಾರ್ಯಾಚರಣೆ ಮುಂದುವರೆದಿರುತ್ತದೆ ಎಂದು ಪೋಲಿಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.