ಸುಪ್ರೀಂ ಕೋರ್ಟ್‌ನ ಆದೇಶದಂತೆ ಕರ್ನಾಟಕ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
“ಕಳೆದ 3 ದಶಕಗಳಿಂದ ನಡೆಸಿದ ಒಳಮೀಸಲಾತಿ ಹೋರಾಟದ ಸಲುವಾಗಿ ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪು ನೀಡಿದೆ. ಇದೀಗ ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಮೀನಾಮೇಷ ಎಣಿಸುವುದನ್ನು ಬಿಟ್ಟು ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.
“ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸದಿದ್ದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಸಿರುವುದಕ್ಕೆ ಕಾನೂನು ಹೋರಾಟದ ಮೂಲಕ ತೀವ್ರ ಹೋರಾಟ ಹಮ್ಮಿಕೊಳ್ಳುಲಾಗುವುದು” ಎಂದು ಎಚ್ಚರಿಸಿದರು.
“ಸಂವಿಧಾನದ ಪರಿಚ್ಛೇದಗಳಾದ 15(4)ನೇ, 16(4)ನೇ ವಿಧಿಗಳ ಅಡಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ಒಳಮೀಸಲಾತಿ ಜಾರಿ ಮಾಡಬೇಕು. ಬ್ಯಾಕ್‌ಲಾಗ್ ಸೇರಿದಂತೆ ಇತರ ಯಾವುದೇ ಹುದ್ದೆ ನೇಮಕಾತಿ ಆದೇಶವನ್ನು ಒಳಮೀಸಲಾತಿ ಜಾರಿ ಆದೇಶ ಆಗುವವರೆಗೆ ನೀಡಬಾರದು. ಹಾಗಾಗಿ ಕೂಡಲೇ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಹಾಸನ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆ ಬೃಹತ್ ಪ್ರತಿಭಟನೆ
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಪ್ರಮುಖರಾದ ತಿಮ್ಲಾಪುರ ಲೋಕೇಶ್, ಶಿವಣ್ಣ ಹೆಚ್ ಭಾನುಪ್ರಸಾಧ್, ಎಸ್ ನಾಗರಾಜ್, ರಾಜಕುಮಾರ್ ಚಿನ್ನಯ್ಯ, ಇ ರಮೇಶ್, ಹಾಲೇಶಪ್ಪ, ಅಮಿತ್ ಆನಂದಪುರ, ಅಕ್ಷಯ್, ನಾಗರಾಜ್, ವಿಕಾಸ್, ಡಿಂಗ್ರಿ ನರೇಶ್, ಮೂರ್ತಿ ಸಿ, ಮಹಾದೇವಪ್ಪ ಯಡೆಹಳ್ಳಿ, ರಂಗಪ್ಪ, ಸಿದ್ದಪ್ಪ, ಶಿವಾಜಿ, ಎಸ್ ಶಿವಲಿಂಗಪ್ಪ, ಅಣ್ಣಪ್ಪ ಸೇರಿದಂತೆ ಇತರರು ಇದ್ದರು.