ಕಲಬುರಗಿ | ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

Date:

Advertisements

ಯುಬಿಡಿಟಿ ಕಾಲೇಜಿನ 50% ಸೀಟುಗಳನ್ನು ಹೆಚ್ಚಿನ ಶುಲ್ಕಕ್ಕೆ ಮಾರುವ ನಿರ್ಧಾರವನ್ನು ಕೈಬಿಡಲು ಆಗ್ರಹಿಸಿ ಎಐಡಿಎಸ್‌ಓ ಕಲಬುರಗಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ. ಮಾತನಾಡಿ, “ಕಳೆದ ಒಂದು ತಿಂಗಳಿನಿಂದ, ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜನ್ನು ಉಳಿಸಿಕೊಳ್ಳಲು ಹೋರಾಟ ನಡೆಸುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಅತ್ಯಂತ ಹಳೆಯ ಕಾಲೇಜುಗಳಲ್ಲಿ ಒಂದಾದ ಹಾಗೂ ರಾಜ್ಯದ ಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಾದ ಯುಬಿಡಿಟಿಯಲ್ಲಿ ಶೇ.50 ರಷ್ಟು ಪ್ರಮಾಣದ ಸೀಟುಗಳಲ್ಲಿ ಭೀಕರ ಶುಲ್ಕ ಏರಿಕೆಯನ್ನು ಮಾಡಿ, 97 ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿಗಳಿಂದ ಪಡೆಯಲು ನಿರ್ಧರಿಸಲಾಗಿದೆ” ಎಂದು ಆರೋಪಿಸಿದರು.

aidso1

“ದೇಶದ ಯಾವುದೇ, ಸರ್ಕಾರದ ದೇಣಿಗೆಯಿಂದ ನಡೆಯುವ ಒಂದು ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಪ್ರಮಾಣದ ಶುಲ್ಕ ಪಡೆಯುವ ನಿರ್ವಹಣಾ ಕೋಟಾದ ಸೀಟುಗಳ ಸಂಖ್ಯೆ ಇಲ್ಲ. ಸರ್ಕಾರಿ ಇಂಜಿನಿಯರಿಂಗ್ ಶುಲ್ಕವೇ. 43 ಸಾವಿರದಷ್ಟಿದ್ದು, ಈಗಾಗಲೇ ಬಡ ವಿದ್ಯಾರ್ಥಿಗಳಿಗೆ ಇದನ್ನು ಭರಿಸಲು ಕಷ್ಟ ಸಾಧ್ಯವಾಗಿದೆ. ಅಂತಹ ಸಂದರ್ಭದಲ್ಲಿ, ಸರ್ಕಾರಿ ಕಾಲೇಜು ಒಂದರಲ್ಲಿ 97,000 ಶುಲ್ಕ ಪಡೆಯುವುದು ವಿದ್ಯಾರ್ಥಿಗಳ ಮೇಲೆ ಒಂದು ಬೃಹತ್ ಪ್ರಹಾರವಾಗಿದೆ. ಇದೇ ರೀತಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಯುವಿಸಿಇ ಕಾಲೇಜ್ ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಏರಿಸುವ ಹಾಗೂ ಕಾಲೇಜು ನಿರ್ವಹಣೆಯ ಹಣವನ್ನು ವಿದ್ಯಾರ್ಥಿಗಳ ಶುಲ್ಕ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇದು ಸಾರ್ವಜನಿಕ ಶಿಕ್ಷಣದ ಮೂಲ ಉದ್ದೇಶಕ್ಕೆ ವಿರುದ್ಧವಾದ ನಡೆಯಾಗಿದೆ” ಎಂದರು.

Advertisements
aidso3

“ತಮ್ಮ ಸರ್ಕಾರ, ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ಪ್ರೇಮಿ ಜನ, ರಾಷ್ಟ್ರೀಯ ಶಿಕ್ಷಣ ನೀತಿ (2020) ವಿರೋಧಿಸಿ ನಡೆಸಿದ “ಸಾರ್ವಜನಿಕ ಶಿಕ್ಷಣ ಉಳಿಸಿ” ಎಂಬ ಹೋರಾಟಕ್ಕೆ ಸ್ಪಂದಿಸಿ ರಾಜ್ಯದಲ್ಲಿ ಎನ್.ಈ.ಪಿ(2020) ಹಿಂಪಡೆದು ವಿದ್ಯಾರ್ಥಿಗಳ ಪರವಾದ ನಿಲುವನ್ನು ತಾಳಿದ್ದೀರಿ. ದೇಶದಲ್ಲಿಯೇ, ಶಿಕ್ಷಣ ವಿರೋಧಿ ಹಾಗೂ ಬಡ ಮಕ್ಕಳ ಕೈಯಿಂದ ಉನ್ನತ ಶಿಕ್ಷಣ ಕಸಿಯುವ ಎನ್.ಇ.ಪಿ (2020)ನ್ನು ಹಿಂಪಡೆದ ಏಕೈಕ ರಾಜ್ಯ ಕರ್ನಾಟಕ, ಆದರೆ, ಇದೀಗ ಎನ್.ಈ.ಪಿ (2020)ರ ಭಾಗವೇ ಆಗಿರುವ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಶುಲ್ಕ ಏರಿಕೆ, ಅನುದಾನ ಕಡಿತ ಹಾಗೂ ವಿದ್ಯಾರ್ಥಿಗಳ ಶುಲ್ಕದಲ್ಲಿ ಕಾಲೇಜು ನಿರ್ವಹಣೆ ಇವುಗಳನ್ನು ರಾಜ್ಯದಲ್ಲಿ ಅನುಷ್ಠಾನ ಗೊಳಿಸುತ್ತಿರುವುದು ಅತ್ಯಂತ ವಿಷಾದನೀಯ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ ಅನುದಾನ ದುರ್ಬಳಕೆ; ಸಹಾಯಕ ಇಂಜಿನಿಯರ್‌ಗಳ ಅಮಾನತಿಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಈ ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರೀತಿ ದೊಡ್ಡಮನಿ, ಗೋವಿಂದ ಯಳವಾರ, ಜಿಲ್ಲಾ ಸಮಿತಿ ಸದಸ್ಯರಾದ ಅಜಯ, ಸ್ಫೂರ್ತಿ, ಬಾಬೂ, ಯುವರಾಜ್, ರಾಹುಲ್, ಸಂಪತ್, ವಿದ್ಯಾರ್ಥಿಗಳಾದ ಸಂತೋಷ್, ಪವಿತ್ರ, ಅಂಕಿತಾ, ಮಹಾಲಕ್ಷ್ಮಿ, ರಕ್ಷಿತಾ, ರತ್ನ, ಸೌಂದರ್ಯ, ಅಭಿಶೇಖ್, ಮಂಜು,ಮಹಾದೇವ ಇನ್ನಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X