ತನ್ನ ಮಲಮಕ್ಕಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ತನ್ನ ಎರಡನೆ ಪತಿ ತನ್ನ ಎರಡು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮಹಿಳೆ ಗಾಜಿಯಾಬಾದ್‌ನ ಕವಿನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತನ್ನ ಎರಡನೇ ಪತಿ ಆರು ತಿಂಗಳ ಹಿಂದೆ ತನ್ನ ಅಪ್ರಾಪ್ತ ಮಲಮಕ್ಕಳಿಬ್ಬರಿಗೂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ.
ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು
“ಬುಧವಾರದಂದು ತನ್ನ ಪತಿ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ತಾನು ನೋಡಿದ ಬಳಿಕ ಮಹಿಳೆಗೆ ತನ್ನ ಮಕ್ಕಳ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿರುವುದು ತಿಳಿದುಬಂದಿದೆ” ಎಂದು ಸಹಾಯಕ ಪೊಲೀಸ್ ಆಯುಕ್ತ (ಕವಿನಗರ) ಅಭಿಷೇಕ್ ಶ್ರೀವಾಸ್ತವ್ ಹೇಳಿದ್ದಾರೆ.
“ತನ್ನ ಮಲತಂದೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯ 16 ವರ್ಷದ ಮಗಳು ಕೂಡಾ ಆರೋಪಿಸಿದ್ದಾಳೆ. ತಮ್ಮ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಯಾರಿಗಾದರು ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಯು ಹೆಣ್ಣು ಮಕ್ಕಳಿಗೆ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಅತ್ಯಾಚಾರಗೈದು ಮಹಿಳೆಯನ್ನು ಎಸೆದು ಹೋದ ವಿಕೃತ ಕಾಮುಕರು
ತನ್ನ ಪತಿಗೆ ತನ್ನ ಅತ್ತೆಯೇ ಬೆಂಬಲ ನೀಡುತ್ತಿದ್ದರು. ಅತ್ತೆಯ ಸಹಾಯದಿಂದ ಇಬ್ಬರು ಹೆಣ್ಣು ಮಕ್ಕಳ ಮೇಲೆ ತನ್ನ ಪತಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಶ್ರೀವಾಸ್ತವ್ ಹೇಳಿದರು.
ದೂರುದಾರ ಮಹಿಳೆ ತನ್ನ ಮೊದಲ ಪತಿಯಿಂದ ವಿಚ್ಛೇದನ ಪಡೆದ ನಂತರ ಆರೋಪಿಯನ್ನು ಮದುವೆಯಾಗಿದ್ದಾರೆ.
