ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಸಮೀಪದ ಕಪ್ಪಲಗುದ್ದಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು ಚಾಲಕ-ನಿರ್ವಾಹಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್‌ನಲ್ಲಿ 51 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದು, ಎದುರಿನಿಂದ ವೇಗವಾಗಿ ಬಂದ ಲಾರಿ ತಪ್ಪಿಸಲು ಹೋಗಿ ವಿಜಯಪುರ-ಗೋಕಾಕ ಮಾರ್ಗದ ಬಸ್ ರಸ್ತೆ ಬದಿ ಪಲ್ಟಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಒಳಮೀಸಲಾತಿ ಜಾರಿಯಾಗುವವರೆಗೆ ಹುದ್ದೆಗಳಿಗೆ ನೇಮಕಾತಿ ತಡೆಯಲು ಆಗ್ರಹಿಸಿ ಪ್ರತಿಭಟನೆ
ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಮೂಡಲಗಿ, ಮಹಾಲಿಂಗಪುರ, ಗೋಕಾಕ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.